ಬೆಂಗಳೂರು: ಡಿವೈಡರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 12 ಮಂದಿ ಗಾಯಗೊಂಡಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಕೆಎಚ್‍ಬಿ ಕಾಲೋನಿಯಿಂದ ಕಾವಲ್ ಬೈರಸಂದ್ರ ಕಡೆಗೆ ಹೋಗುತ್ತಿತ್ತು. ಈ ವೇಳೆ ರಾಜಾಜಿನಗರದ ಫ್ಲೈಓವರ್ ಹತ್ತುವಾಗ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಪರಿಣಾಮ ಬಸ್‍ನಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ ಡ್ರೈವರ್ ಸೇರಿದಂತೆ 12 ಮಂದಿ ಗಾಯಗೊಂಡಿದ್ದಾರೆ.
Advertisement
Advertisement
ಡ್ರೈವರ್ ಪ್ಲೈಓವರ್ ಮೇಲೆ ಹೋಗುವಾಗ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಆತನನ್ನು ರಕ್ಷಿಸಲು ಚಾಲಕ ಬಲಗಡೆಗೆ ಹೋಗುವಾಗ ಬಸ್ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕೆಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಗಾಯಗೊಂಡವರನೆಲ್ಲಾ ಮಲ್ಲೆಶ್ವರಂನ ಕೆ.ಸಿಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿ ತಿಳಿಸಿದ್ದಾರೆ.
Advertisement
ಈ ಬಗ್ಗೆ ಮಾಹಿತಿ ತಿಳಿದ ರಾಜಾಜಿನಗರ ಸಂಚಾರಿ ಪೊಲೀಸರು ಮತ್ತು ಅಗ್ನಿಶಾಮಕದಳ, ಬಿಎಂಟಿಸಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪೂರ್ಣವಾಗಿ ಜಖಂಗೊಂಡ ಬಸ್‍ನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟದ್ದರು.
Advertisement
ಸದ್ಯಕ್ಕೆ ಅಪಘಾತಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ. ಸದ್ಯಕ್ಕೆ ಈ ಅನಾಹುತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.