ಬೆಂಗಳೂರು: ಹೆದ್ದಾರಿಯಲ್ಲಿ ಚಾಲಕನ ಅಜಾಗರೂಕತೆಯಿಂದ ಬಸ್ ಹಳ್ಳಕ್ಕೆ ಬಿದ್ದು 15 ಮಂದಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (Hosakote) ತಾಲೂಕಿನ ಅತ್ತಿವಟ್ಟ ಬಳಿ ನಡೆದಿದೆ.
ಕೋಲಾರ ಹೊಸಕೋಟೆ ಹೆದ್ದಾರಿ 75 ರ ಅತ್ತಿವಟ್ಟ ಬಳಿ ಘಟನೆ ನಡೆದಿದ್ದು, ಕೆಎಸ್‍ಆರ್‌ಟಿಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಮಂತ್ರಾಲಯದಲ್ಲಿದ್ದ ಕೋಲಾರ (Kolar) ಕ್ಕೆ ಹೋಗುತ್ತಿದ್ದ ಬಸ್ ಇದಾಗಿದ್ದು ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅತೀ ವೇಗವಾಗಿ ಬಂದು ಹೆದ್ದಾರಿಯ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಬಂದು ಸರ್ವೀಸ್ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಸ್ ಇಳಿದಿದೆ. ಈ ರಭಸಕ್ಕೆ ಬಸ್ ನಲ್ಲಿದ್ದ ಎಲ್ಲರೂ ಸಹ ಚೆಲ್ಲಾಪಿಲ್ಲಿಯಾಗಿ ಮೂರು ಮಂದಿಯ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಕರವೇ ಪ್ರತಿಭಟನೆ – ಮಹಾರಾಷ್ಟ್ರ ಪಾಸಿಂಗ್ ಇದ್ದ ವಾಹನಕ್ಕೆ ಕಪ್ಪು ಮಸಿ ಬಳಿದು ವೈಪರ್ ಮುರಿದು ಆಕ್ರೋಶ
ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಹೆದ್ದಾರಿಯಲ್ಲಿ ಘಟನೆ ನಡೆದಿದ್ದರಿಂದ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.