– ಅವಶೇಷದಡಿ ಹಲವರು ಸಿಲುಕಿರುವ ಶಂಕೆ
ನವದೆಹಲಿ: ದಕ್ಷಿಣ ದೆಹಲಿಯ ಸಾಕೇತ್ ಮೆಟ್ರೋ ನಿಲ್ದಾಣದ (Saket Metro Station) ಸಮೀಪ 5 ಅಂತಸ್ತಿನ ಕಟ್ಟಡವೊಂದು ಕುಸಿದು (Building Collapse) ಬಿದ್ದಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ರಾತ್ರಿ 7:45ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಕಟ್ಟಡದ ನೆಲಮಹಡಿಯಲ್ಲಿ ಕೋಚಿಂಗ್ ಸೆಂಟರ್ ಇತ್ತು. ಮೇಲಿನ ಮೂರು ಅಂತಸ್ತುಗಳಲ್ಲಿ ಕೆಫೆ ಹಾಗೂ ಕಚೇರಿಒಗಳು ಇದ್ದವು. ಅಲ್ಲದೇ ಮೂರನೇ ಮಹಡಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಅವಶೇಷಗಳಡಿ ವಿದ್ಯಾರ್ಥಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: RCB Vs GT Final – ಈ ಸಲ ಕಪ್ ನಮ್ದಾ, ನಿಮ್ದಾ? ಮೋದಿ ಅಂಗಳದಲ್ಲಿ ರನ್ ಹೊಳೆ ಹರಿಯುತ್ತಾ?
#WATCH | Delhi: Rescue operation is underway after a five storey building collapsed in the Mehrauli police station area. pic.twitter.com/hzQl92FsSp
— ANI (@ANI) May 30, 2026
5 ಅಂತಸ್ತಿನ ಕಟ್ಟಡ ಸಂಪೂರ್ಣ ಕುಸಿದಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ರೇಖಾ ಗುಪ್ತ ಕಳವಳ ವ್ಯಕ್ತಪಡಿಸಿದ್ದು, ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಾಮಾನ್ಯ ಕಾರ್ಯಕರ್ತನಿಂದ ಅನಿವಾರ್ಯ ನಾಯಕ – `ಕನಕಪುರ ಬಂಡೆ’ ಅಂದ್ರೆ ಕಾಂಗ್ರೆಸ್ ಪಾಲಿಗೆ ಪಕ್ಷನಿಷ್ಠ
ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ, ಎನ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದಾರೆ. ಜೆಸಿಬಿ ಸೇರಿದಂತೆ ಭಾರೀ ಯಂತ್ರಗಳ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪೆಟ್ರೋಲ್‌ಗಿಂತ ಎಥೆನಾಲ್ ಅಗ್ಗ? ದರ ಏರಿಕೆ ಹೊತ್ತಲ್ಲೇ ಚರ್ಚೆಗೆ ಬಂತು ‘E100’
