12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Public TV
1 Min Read
RAPE 4

ಲಕ್ನೋ: ಎಂಟು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆಯ ಪೋಷಕರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ಆಟವಾಡುವ ವೇಳೆ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರಕ್ಕೆ ಯತ್ನದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಭಾನುವಾರ ವರದಿ ಕೈ ಸೇರುವ ಸಾಧ್ಯತೆ ಇದೆ. ಬಾಲಕಿಯ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲು ಮಾಡಿಕೊಳ್ಳಲಾಗುವುದು. ಆದರೆ ಬಾಲಕನನ್ನು ಇನ್ನು ವಶಕ್ಕೆ ಪಡೆದಿಲ್ಲ ಎಂದು ಹಿರಿಯ ಪೊಲೀಸ್ ಆಧಿಕಾರಿ ಆರ್.ಪಿ ಶರ್ಮಾ ತಿಳಿಸಿದ್ದಾರೆ.

Child rape

ಸಂತ್ರಸ್ತೆಯ ಪೋಷಕರು ದೂರಿನಲ್ಲಿ ತಿಳಿಸಿರುವಂತೆ ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದು, ಶುಕ್ರವಾರ ಸಂಜೆ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಅನಂತರ ಆಕೆ ಮನೆಗೆ ವಾಪಸ್ ಬಂದಿದ್ದು ಈ ವೇಳೆ ತನಗದ ದೌರ್ಜನ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಾಲಕ ಕೂಡ ಆದೇ ಗ್ರಾಮದ ನಿವಾಸಿಯಾಗಿದ್ದು, 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಬಾಲಕಿಯಿಂದ ಮಾಹಿತಿ ಪಡೆದ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವೇಳೆ ಆರೋಪಿ ಕುಟುಂಬ ಬಗ್ಗೆ ನಮಗೆ ಯಾವುದೇ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯ ಎರಡು ಕುಟುಂಬಗಳು ಬಡತನದಿಂದ ಕೂಡಿದ್ದು, ಬಾಲಕಿ ತಂದೆ ದಿನಗೂಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Bangalore 20141031 600 855

Share This Article
Leave a Comment

Leave a Reply

Your email address will not be published. Required fields are marked *