ಕೊಪ್ಪಳ: ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಮುಕ್ಕುಂಪಿ ಗ್ರಾಮದ ಬಳಿ ನಡೆದಿದೆ.
Advertisement
Advertisement
ಮುಕ್ಕುಂಪಿ ಗ್ರಾಮದ 12 ವರ್ಷದ ಬಾಲಕ ಬಸವರಾಜ ಮೃತ ಬಾಲಕ. ಈತ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ವತಃ ಶಾಸಕರೇ ತಮ್ಮ ಕಾರ್ ನಲ್ಲಿ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ವಾಹನ ಗಮನಿಸದೇ ರಸ್ತೆ ದಾಟಿದ್ದು ಘಟನೆಗೆ ಕಾರಣ ಎನ್ನಲಾಗಿದೆ.
Advertisement
Advertisement
ಚಿಕಿತ್ಸೆಗಾಗಿ ಬಾಲಕನನ್ನು ಕರೆ ತಂದಿದ್ದ ಗಂಗಾವತಿ ಸರ್ಕಾರಿ ಆಸ್ಪತ್ರೆ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.