ಭೋಪಾಲ್: 18 ವರ್ಷದ ಯುವಕನೊಬ್ಬ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆರೋಪಿಯನ್ನು ಅವಿನಾಶ್ ಸಾಹು(18) ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಚಿಕ್ಕಮ್ಮನಿಗೆ ಆರೋಪಿ ಬಗ್ಗೆ ತಿಳಿದಿದ್ದು, ಆಕೆಯೂ ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಏನಿದು ಪ್ರಕರಣ?
ಬಾಲಕಿ ಮಂಗಳವಾರ ಸಂಜೆ ತನ್ನ ಚಿಕ್ಕಮ್ಮನೊಂದಿಗೆ ಜೈನ ಬಸದಿಗೆ ಹೋಗಿದ್ದಳು. ಆಗ ಸಾಹು ಬಂದು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಆದರೆ ಆರೋಪಿ ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಿಕ್ಕಮ್ಮ ಸ್ಥಳದಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತ ಬಾಲಕಿಯ ಪೋಷಕರು ಮಗಳು ಮನೆಗೆ ಬಂದಿಲ್ಲ ಎಂದು ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ನಂತರ ಮರುದಿನ ಕುಟುಂಬದವರು ಪೋಲಿಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಪೊಲೀಸರು ಅನುಮಾನದ ಮೇರೆಗೆ ಆರೋಪಿಯ ಜೊತೆ ಬಾಲಕಿ ಚಿಕ್ಕಮ್ಮನನ್ನು ಬಂಧಿಸಿದ್ದಾರೆ.
ಸದ್ಯಕ್ಕೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ವರದಿಗೆ ಕಾಯುತ್ತಿದ್ದಾರೆ.