ಜೈಪುರ: 12 ವರ್ಷದ ಬಾಲಕನೊಬ್ಬ 4 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನ ಉದಯಪುರ ಜಿಲ್ಲೆಯ ಜಾಡೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಘಟನೆ ನಡೆದಿದ್ದು, ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.
ಶನಿವಾರ ಸಂಜೆ ಬಾಲಕ ತನ್ನ ಪಕ್ಕದ ಮನೆಯ ಕಂದಮ್ಮನ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕ ಮಧ್ಯಾಹ್ನ ಮನೆಯಿಂದ ಹೊರ ಹೋಗಿದ್ದನು. ಆದ್ರೆ ಆತನ ಪೋಷಕರು ಗೆಳೆಯರೊಂದಿಗೆ ಆಟ ಆಡುತ್ತಿರಬಹುದು ಎಂದು ಭಾವಿಸಿದ್ದರು.
ಬಾಲಕಿ ಸಂಜೆ ಮನೆಗೆ ಬಂದಾಗ ಆಕೆಯ ಬಟ್ಟೆಯೆಲ್ಲಾ ರಕ್ತಮಯವಾಗಿದ್ದು, ಗುಪ್ತಾಂಗದಲ್ಲಿ ಕಾಣಿಸಿಕೊಂಡ ನೋವಿನಿಂದ ಅಳುತ್ತಾ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ಜೀವನೋಪಾಯಕ್ಕಾಗಿ ಉದಯಪುರದಲ್ಲಿ ನೆಲೆಸಿದ್ದಾರೆ.
ಘಟನೆ ಮಧ್ಯಾಹ್ನ ಸುಮಾರು 3.30ಕ್ಕೆ ನಡೆದಿದೆ. ಬಾಲಕಿಯ ಮನೆಯಲ್ಲಿ ಆಕೆಯ ಮಲ ತಾಯಿ ಮತ್ತೋರ್ವ ಮಹಿಳೆ ಇದ್ದರು. ಆದ್ರೆ ಮಗು ಮಧ್ಯಾಹ್ನದಿಂದ ಕಾಣೆಯಾಗಿದ್ದನ್ನು ಇಬ್ಬರು ಸಹ ಗಮನಿಸಿಲ್ಲ. ರಕ್ತದ ಮಡುವಿನಲ್ಲಿ ಮಗು ಸಂಜೆ 5.30ಕ್ಕೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲ ವೈದ್ಯಕೀಯ ಪರೀಕ್ಷೆಯ ಬಳಿಕ ಆಕೆಯ ಪೋಷಕರೊಂದಿಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂದಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv