– ನಾಳೆ ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ; ನೆಹರೂ ದಾಖಲೆ ಮುರಿಯಲಿರುವ ‘ನಮೋ’
ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ (Narendra Modi) ಭಾಜನರಾಗುತ್ತಿದ್ದಾರೆ. ಅತ್ಯಂತ ಸುದೀರ್ಘ ಅವಧಿಗೆ ಆಯ್ಕೆಯಾದ ಪ್ರಧಾನಿ ಎಂಬ ನೆಹರೂ ದಾಖಲೆಯನ್ನು ನಾಳೆ ಮೋದಿ ಮುರಿಯಲಿದ್ದಾರೆ.
ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ ದೇಶಾದ್ಯಂತ ಸಹೋದರತ್ವ ಕಾರ್ಯಕ್ರಮ ಹಮ್ಮಿಕೊಂಡಿದೆ. ಜೂನ್ 5ರಿಂದ 21ರವರೆಗೂ ಕೇಂದ್ರ ಸರ್ಕಾರದ ಯೋಜನೆಗಳು, ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದು, ಎಲ್ಲಾ ರಾಜ್ಯಗಳು ಹಾಗೂ ಜಿಲ್ಲೆ, ತಾಲೂಕುಗಳಲ್ಲೂ ಸುದ್ದಿಗೋಷ್ಠಿ ನಡೆಸಲು ಕೇಂದ್ರ ಸಚಿವರು, ಬಿಜೆಪಿ ಆಡಳಿತದ ರಾಜ್ಯದ ಸಿಎಂಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ನರಮೇಧವನ್ನು ಸೇನಾ ಕಾರ್ಯಾಚರಣೆ ಎನ್ನಲಾಗದು – ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಕಿಡಿ
ಪ್ರಧಾನಿ ಮೋದಿ ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇತ್ತ, ಕಾಂಗ್ರೆಸ್ ನಾಯಕರು ಮಾತ್ರ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 12 ವರ್ಷಗಳಲ್ಲಿ ಮೋದಿ ಸರ್ಕಾರ ಬಡವರ ಕೆಲಸದ ಹಕ್ಕು ಕಿತ್ತುಕೊಂಡಿದೆ. ಮನ್ರೇಗಾ ಯೋಜನೆಯಡಿ ಕೆಲಸ ಮಾಡುವ ಹಕ್ಕು ಕಸಿದುಕೊಳ್ಳುತ್ತಿದೆ. 12 ವರ್ಷಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪದೇ ಪದೇ ಹೆಚ್ಚಿಸಿದ್ದಾರೆ. ಬಡವರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ ಎಂದು ಟ್ವೀಟ್ ಕಿಡಿಕಾರಿದ್ದಾರೆ. ಈ ಮಧ್ಯೆ, ರಾಜ್ಯದ ವಿವಿಧ ದೇಗುಲಗಳಲ್ಲಿ ನಾಳೆ ಬಿಜೆಪಿ ವಿಶೇಷ ಪೂಜೆ ನಡೆಸಲಿದೆ. ಇದನ್ನೂ ಓದಿ: 12 ವರ್ಷ ಪ್ರಧಾನ ಸೇವಕರಾಗಿ ಮೋದಿ ಸೇವೆ; ರಾಜ್ಯದ ದೇವಸ್ಥಾನಗಳಲ್ಲಿ ನಾಳೆ ವಿಶೇಷ ಪೂಜೆ
