ರಾಮನಗರ: 16.8 ಲಕ್ಷ ರೂ. ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚನ್ನಪಟ್ಟಣ (Channapatna) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಗಲ್ ದೇವಸ್ಥಾನದ ಬಳಿ ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಪ್ರಕರಣ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ
ಒಟ್ಟು ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರು ಚನ್ನಪಟ್ಟಣದ ಕೆಂಗಲ್ ದೇವಾಲಯದ ಬಳಿಯೂ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇಬ್ಬರು ಖದೀಮರನ್ನ ಪತ್ತೆಹಚ್ಚಿ ಅರೆಸ್ಟ್ ಮಾಡಿದ್ದಾರೆ.
ಬಂಧಿತರಿಂದ ಸುಮಾರು 16.8 ಲಕ್ಷ ರೂ. ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿಗಳನ್ನು ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ನಾಲ್ಕು ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

