ಹುಬ್ಬಳ್ಳಿ: ಕಾಂಗ್ರೆಸ್ (Congress) ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,200ಕ್ಕೂ ಹೆಚ್ಚು ರೈತರು (Farmers) ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ವಿಷಾದಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿ
Advertisement
Advertisement
ರೈತರ ಮನವಿ ಪತ್ರ ಕಸದ ಬುಟ್ಟಿಗೆ:
ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿತು. ಇಂತಹ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ್ ಜೋಶಿ ತಮ್ಮ `ಎಕ್ಸ್’ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ
Advertisement
ನುಡಿದಂತೆ ನಡೆಯದ ಕಾಂಗ್ರೆಸ್:
ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಕಾಂಗ್ರೆಸ್‌ಗೆ ಇಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಕೋಟಿ ಕೋಟಿ ಲೂಟಿ ಆರೋಪ
Advertisement
ರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ