ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಇಂದು ಒಟ್ಟು 1,206 ಪಾಸಿಟಿವ್ ಕೇಸ್ ದಾಖಲಾಗಿದೆ. ಈ ನಡುವೆ ಪಾಸಿಟಿವಿಟಿ ರೇಟ್ ಶೇ.10ರ ಸನಿಹದಲ್ಲಿದೆ.
Advertisement
ಇಂದು ಪಾಸಿಟಿವಿಟಿ ರೇಟ್ ಶೇ. 9.62ಕ್ಕೆ ಏರಿಕೆ ಕಂಡಿದೆ. ನಿನ್ನೆ ಶೇ. 6.32ರಷ್ಟು ದಾಖಲಾಗಿತ್ತು. ಪಾಸಿಟಿವಿಟಿ ರೇಟ್ ನಿಧಾನವಾಗಿ ಏರಿಕೆ ಕಾಣುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,475ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲಿ ಪಾಸಿಟಿವ್ ಕೇಸ್ಗಳ ಸಂಖ್ಯೆ ಅಲ್ಪ ಇಳಿಕೆ ಕಂಡಿದ್ದು, ಇಂದು 870 ಪ್ರಕರಣ ದಾಖಲಾಗಿದೆ. ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ದಾಖಲಾದ 60 ಕೇಸ್ ಹೆಚ್ಚಿನ ಕೇಸ್ ಆಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಈವರೆಗೆ ಒಟ್ಟು 40,147 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,653 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಯೋಗ್ಯತೆ ಇಲ್ಲದವರು ಈಗ ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ – ಗುಡುಗಿದ ಬಿ.ಎಲ್ ಸಂತೋಷ್
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 40,32,489 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,81,825 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9,492 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 12,533 ಸ್ಯಾಂಪಲ್ (ಆರ್ಟಿಪಿಸಿಆರ್ 9,127 + 3,406 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನೃತ್ಯದಲ್ಲಿ ಸಾವರ್ಕರ್ ಫೋಟೋ – ಮುಖ್ಯೋಪಾಧ್ಯಾಯರನ್ನು ಕರೆಸಿ ಕ್ಷಮೆ ಹೇಳಿಸಿದ ಪಂಚಾಯತ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 3, ಬಳ್ಳಾರಿ 38, ಬೆಳಗಾವಿ 33, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 870, ಬೀದರ್ 1, ಚಾಮರಾಜನಗರ 10, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 42, ಚಿತ್ರದುರ್ಗ 4, ದಕ್ಷಿಣ ಕನ್ನಡ 10, ದಾವಣಗೆರೆ 3, ಧಾರವಾಡ 8, ಗದಗ 4, ಹಾಸನ 3, ಹಾವೇರಿ 0, ಕಲಬುರಗಿ 17, ಕೊಡಗು 12, ಕೋಲಾರ 18, ಕೊಪ್ಪಳ 2, ಮಂಡ್ಯ 20, ಮೈಸೂರು 60, ರಾಯಚೂರು 19, ರಾಮನಗರ 11, ಶಿವಮೊಗ್ಗ 5, ತುಮಕೂರು 1, ಉಡುಪಿ 8, ಉತ್ತರ ಕನ್ನಡ 3, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]