Advertisements

ರಾಜ್ಯದಲ್ಲಿ 124 ಮಂದಿಗೆ ಕೊರೊನಾ -159 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 124 ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇಂದು ಯಾವುದೇ ಮರಣದ ಪ್ರಕರಣಗಳು ದಾಖಲಾಗಿಲ್ಲ.

Advertisements

ಸಿಲಿಕಾನ್ ಸಿಟಿಯಲ್ಲಿಂದು 116 ಪಾಸಿಟಿವ್ ಕೇಸ್‍ಗಳು ದಾಖಲಾಗಿದ್ದು, ಯಾವುದೇ ಮರಣದ ಪ್ರಕರಣಗಳು ದಾಖಲಾಗಿಲ್ಲ. ಇಂದು 159 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.64 ದಾಖಲಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,726ಕ್ಕೆ ತಲುಪಿದೆ. ರಾಜ್ಯದಲ್ಲಿಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಆದರೆ ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ.

Advertisements

ಈವರೆಗೆ ರಾಜ್ಯದಲ್ಲಿ ಒಟ್ಟು 39,50,128 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,08,136 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 50,899 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 19,141 ಸ್ಯಾಂಪಲ್ (ಆರ್‌ಟಿಪಿಸಿಆರ್ 14,132 + 5,009 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

Advertisements

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 1, ಚಾಮರಾಜನಗರ 11, ದಕ್ಷಿಣ ಕನ್ನಡ 10, ಧಾರವಾಡ 7, ಬೀದರ್ 4, ಬಳ್ಳಾರಿ 2, ಬೆಳಗಾವಿ 2, ಹಾಸನ 2, ಶಿವಮೊಗ್ಗ, ಕೊಡಗು, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 124 ಕೋವಿಡ್ 19 ಪ್ರಕರಣ ವರದಿಯಾಗಿದೆ.

Advertisements
Exit mobile version