ಬೆಂಗಳೂರು: ಇಂದು ಒಟ್ಟು 1,240 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 1,403 ಮಂದಿ ಬಿಡುಗಡೆಯಾಗಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 9,04,665ಕ್ಕೆ ಏರಿಕೆಯಾಗಿದೆ. ಈ ಪೈಕಿ 8,77,199 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 15,476 ಸಕ್ರಿಯ ಪ್ರಕರಣಗಳಿವೆ.
ಇಲ್ಲಿಯವರೆಗೆ ಒಟ್ಟು 11,971 ಮಂದಿ ಸೋಂಕಿಗೆ ಬಲಿಯಾಗಿದ್ದು, ಸದ್ಯ 248 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒಟ್ಟು 14,720 ಆಂಟಿಜನ್, 87,030 ಆರ್‌ಟಿ ಪಿಸಿಆರ್ ಸೇರಿದಂತೆ ಒಟ್ಟು 1,01,750 ಪರೀಕ್ಷೆ ಮಾಡಲಾಗಿದೆ. ಒಟ್ಟು ಇಲ್ಲಿಯವರೆಗೆ ರಾಜ್ಯದಲ್ಲಿ 1,26,11,493 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 676 ಮಂದಿಗೆ ಸೋಂಕು ಬಂದಿದ್ದು 4 ಮಂದಿ ಮೃತಪಟ್ಟಿದ್ದಾರೆ. ತುಮಕೂರು 57, ಚಿತ್ರದುರ್ಗದಲ್ಲಿ 51, ಮೈಸೂರು 47, ಕೊಡಗು 46 ಮಂದಿಗೆ ಸೋಂಕು ಬಂದಿದೆ. ಐಸಿಯುನಲ್ಲಿ 248 ಮಂದಿ ಇದ್ದು, ಬೆಂಗಳೂರು ನಗರದಲ್ಲಿ 105, ಕಲಬುರಗಿ 25, ತುಮಕೂರಿನಲ್ಲಿ15 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.