ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ಇಂದು ವರದಿಯಾಗಿದೆ.
ಇಂದು ಬೆಂಗಳೂರು ನಗರದಲ್ಲಿ 1,109 ಕೇಸ್ ಜೊತೆಗೆ ಏಕೈಕ ಮರಣ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,393ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 29 ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ಕೊರೊನಾ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಕಂಡುಬಂದಿದೆ. ಇದೀಗ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,707ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 4.84 ಏರಿಕೆ ಕಂಡಿದೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್ ಠಾಕ್ರೆ ರಾಜೀನಾಮೆ
ಇಂದು 1,154 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,075 ಮರಣ ಪ್ರಕರಣ ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,68,365 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,22,541 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 2,33,965 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 25,753 ಸ್ಯಾಂಪಲ್ (ಆರ್ಟಿಪಿಸಿಆರ್ 18,753 + 7,000 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶಿವಸೇನೆ ಅರ್ಜಿ ವಜಾ – ಗುರುವಾರ ವಿಶ್ವಾಸ ಮತಯಾಚನೆಗೆ ಸುಪ್ರೀಂ ಆದೇಶ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 12, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 1,109, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 0, ದಕ್ಷಿಣ ಕನ್ನಡ 29, ದಾವಣಗೆರೆ 1, ಧಾರವಾಡ 13, ಗದಗ 0, ಹಾಸನ 6, ಹಾವೇರಿ 2, ಕಲಬುರಗಿ 2, ಕೊಡಗು 0, ಕೋಲಾರ 5, ಕೊಪ್ಪಳ 0, ಮಂಡ್ಯ 0, ಮೈಸೂರು 31, ರಾಯಚೂರು 1, ರಾಮನಗರ 1, ಶಿವಮೊಗ್ಗ 5, ತುಮಕೂರು 6, ಉಡುಪಿ 6, ಉತ್ತರ ಕನ್ನಡ 8, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.