ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ 1,465 ಇದ್ದ ಕೊರೊನಾ ಪ್ರಕರಣ ಇಂದು 1,255ಕ್ಕೆ ಇಳಿದಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ಮೂವರು ಬಲಿಯಾಗಿದ್ದಾರೆ.
Advertisement
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,775ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲಿ ಇಂದು 747 ಪ್ರಕರಣ ದಾಖಲಾಗಿದೆ. ಈವರೆಗೆ ಒಟ್ಟು 40,179 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 2,186 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ.4.47 ಕ್ಕೆ ತಲುಪಿದೆ. ಇದನ್ನೂ ಓದಿ: ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಗ್ರಂಥಾಲಯದಲ್ಲಿ ಬಂಧಿಸಿದ ಶಿಕ್ಷಕರು
Advertisement
Advertisement
ಈವರೆಗೆ ರಾಜ್ಯದಲ್ಲಿ 40,44,819 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,94,823 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,30,017 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 28,034 ಸ್ಯಾಂಪಲ್ (ಆರ್ಟಿ-ಪಿಸಿಆರ್ 20,600 + 7,434 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 6, ಬಳ್ಳಾರಿ 20, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 18, ಬೆಂಗಳೂರು ನಗರ 747, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 16, ಚಿತ್ರದುರ್ಗ 1, ದಕ್ಷಿಣ ಕನ್ನಡ 13, ದಾವಣಗೆರೆ 9, ಧಾರವಾಡ 19, ಗದಗ 0, ಹಾಸನ 45, ಹಾವೇರಿ 7, ಕಲಬುರಗಿ 17, ಕೊಡಗು 13, ಕೋಲಾರ 29, ಕೊಪ್ಪಳ 2, ಮಂಡ್ಯ 19, ಮೈಸೂರು 114, ರಾಯಚೂರು 21, ರಾಮನಗರ 49, ಶಿವಮೊಗ್ಗ 24, ತುಮಕೂರು 10, ಉಡುಪಿ 9, ಉತ್ತರ ಕನ್ನಡ 14, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತ್ತೆ ದಲಿತ ಬಾಲಕನಿಗೆ ಶಿಕ್ಷಕನಿಂದ ಥಳಿತ – ಆಸ್ಪತ್ರೆಗೆ ದಾಖಲು