ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ನೀಡಿರುವ ಐದು ಭರವಸೆಗಳಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳಾ (Women) ಪ್ರಯಾಣಿಕರ ಸಂಖ್ಯೆ ದಾಖಲೆ ಬರೆದಿದೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಹಿಳಾ ಮಣಿಗಳಿಗಾಗಿ ಉಚಿತ ಬಸ್ ಪ್ರಯಾಣವನ್ನು ಜಾರಿ ಮಾಡಿದ್ದು, ರಾಜ್ಯದ ಎಲ್ಲಾ ಮಹಿಳೆಯರು ನಾ ಮುಂದು ತಾ ಮುಂದು ಎಂದು ಸರ್ಕಾರಿ ಬಸ್ಸಿನತ್ತ ಮುನ್ನುಗುತ್ತಿದ್ದಾರೆ. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 100 ಕೋಟಿ ದಾಟಿತು. ಇದನ್ನೂ ಓದಿ: ನಾವು ದರ ಏರಿಸುತ್ತೇವೆ – ರಾಜ್ಯ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಸಂಘ ಎಚ್ಚರಿಕೆ
Advertisement
Advertisement
ಶಕ್ತಿ ಯೋಜನೆಯಡಿಯಲ್ಲಿ 10 ದಿನಕ್ಕೆ 5 ಕೋಟಿಗೂ ಅಧಿಕ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದು, ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು 126 ಕೋಟಿ ರೂ. ದಾಟಿದೆ. ಅದರಲ್ಲೂ ಬಿಎಂಟಿಸಿ (BMTC) ಬಸ್‌ನಲ್ಲಿ ಅತಿ ಹೆಚ್ಚು ಮಹಿಳೆಯರು ಪ್ರಯಾಣಿಸುತ್ತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ತಲಾ ಒಂದೂವರೆ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದನ್ನೂ ಓದಿ: 10 ಕೆಜಿ ಅಕ್ಕಿಗೆ ದೇವರ ಮೇಲೆ ಭಾರ ಹಾಕಿದ ಮುನಿಯಪ್ಪ
Advertisement
Advertisement
ಕಳೆದ 10 ದಿನದಲ್ಲಿ ಯಾವ ನಿಗಮದಿಂದ ಎಷ್ಟು ಮಹಿಳೆಯರ ಉಚಿತ ಸಂಚಾರ?
ಕೆಎಸ್‌ಆರ್‌ಟಿಸಿ – 1,57,48,205
ಬಿಎಂಟಿಸಿ – 1,80,81,216
ವಾಕರಸಾ – 1,30,97,057
ಕಕರಸಾ – 70,80,646