ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳಲ್ಲಿ ಕಂಡುಬರುತ್ತಿರುವ ಏರಿಳಿತ ಇಂದು ಕೂಡ ಮುಂದುವರಿದಿದೆ. ಇಂದು ಒಟ್ಟು 126 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು 118 ಪಾಸಿಟಿವ್ ಕೇಸ್‍ಗಳು ದಾಖಲಾಗಿದೆ. ಇಂದು 103 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.67 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,891ಕ್ಕೆ ತಲುಪಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,063 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ರಥೋತ್ಸವ ವೇಳೆ ಅವಘಡ – ಇಬ್ಬರು ಭಕ್ತರು ದುರ್ಮರಣ
ಈವರೆಗೆ ರಾಜ್ಯದಲ್ಲಿ ಒಟ್ಟು 39,49,675 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,07,679 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 6,604 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,566 ಸ್ಯಾಂಪಲ್ (ಆರ್ಟಿಪಿಸಿಆರ್ 14,409 + 4,157 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸೋಮವಾರದಿಂದ ಶಾಲೆಗಳ ಪ್ರಾರಂಭಕ್ಕೆ ಸಕಲ ಸಿದ್ಧತೆ – ವಿದ್ಯಾರ್ಥಿಗಳ ಸ್ವಾಗತಕ್ಕೆ ತಳಿರು ತೋರಣಗಳಿಂದ ಸಿಂಗಾರ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 118, ಬಳ್ಳಾರಿ ಮತ್ತು ಹಾಸನ ತಲಾ 2, ದಕ್ಷಿಣ ಕನ್ನಡ 5, ಚಿತ್ರದುರ್ಗ, ಮೈಸೂರು ಮತ್ತು ಶಿವಮೊಗ್ಗದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 126 ಪ್ರಕರಣ ವರದಿಯಾಗಿದೆ.