ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ಇಂದು ಒಟ್ಟು 126 ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಮೂಲಕ ನಿನ್ನೆಗಿಂತ ಇಂದು 7 ಕಡಿಮೆ ಕೇಸ್ ವರದಿಯಾಗಿದ್ದು, ನಿನ್ನೆ 133 ಪಾಸಿಟಿವ್ ಕೇಸ್ ಪತ್ತೆಯಾಗಿತ್ತು. ಹಲವು ದಿನಗಳ ಬಳಿಕ ಇಂದು ಕೊರೊನಾದಿಂದ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇಂದು ಬೆಂಗಳೂರಿನಲ್ಲಿ 120 ಕೇಸ್ ದಾಖಲಾಗಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,785ಕ್ಕೆ ತಲುಪಿದೆ. ಈ ವರೆಗೆ ಒಟ್ಟು 40,059 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 76 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಲ್ಕನೇ ಅಲೆ ನಡುವೆ ರಾಜ್ಯದಲ್ಲಿ ಟೆಸ್ಟಿಂಗ್ ಮತ್ತು ಲಸಿಕೆ ಪಡೆದವರ ಸಂಖ್ಯೆ ಏರಿಕೆ ಕಾಣುತ್ತಿದೆ. ಇದನ್ನೂ ಓದಿ: ಕೋವಿಡ್‌ನ ನಷ್ಟವನ್ನು ನೀಗಿಸಲು ಭಾರತಕ್ಕೆ 15 ವರ್ಷ ಬೇಕು: ಆರ್‌ಬಿಐ
ಈವರೆಗೆ ರಾಜ್ಯದಲ್ಲಿ ಒಟ್ಟು 39,47,622 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,736 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 62,768 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 9,944 ಸ್ಯಾಂಪಲ್ (ಆರ್‌ಟಿ ಪಿಸಿಆರ್ 7,635 + 2,309 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚಾಗ್ತಿದೆ ಕೊರೊನಾ – 24 ಗಂಟೆಗಳಲ್ಲಿ 1,600 ಹೊಸ ಪ್ರಕರಣ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 120, ಚಿಕ್ಕಮಗಳೂರು 2, ಚಿತ್ರದುರ್ಗ 1, ಕಲಬುರಗಿ 1, ಮೈಸೂರು 1 ಹಾಗೂ ಉಡುಪಿಯಲ್ಲಿ 1 ಪ್ರಕರಣ ವರದಿಯಾಗಿದೆ.