ಬೆಂಗಳೂರು: ಇಂದು 1,262 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನರು ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 18,758 ಸಕ್ರಿಯ ಪ್ರಕರಣಗಳಿದ್ದು, ಇಂದು 1,384 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಕೋವಿಡ್-19 ಸೋಂಕು ಹರಡುವಿಕೆ ಶೇಕಡಾವಾರು ಪ್ರಮಾಣ ಶೇ.0.70 ಮತ್ತು ಮರಣ ಪ್ರಮಾಣ ಶೇ.1.34ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 29,47,255 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 37,278 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಇವತ್ತು 1,78,664 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
Advertisement
Advertisement
ರಾಜಧಾನಿ ಬೆಂಗಳೂರಿನಲ್ಲಿ 361 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಆರು ಜನ ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 7,343 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೀದರ್, ಗದಗ, ಚಿಕ್ಕಬಳ್ಳಾಪುರ ಮತ್ತು ಯಾದಗಿರಿಯಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಬೆಂಗಳೂರು ಹೊರತುಪಡಿಸಿದ್ರೆ ದಕ್ಷಿಣ ಕನ್ನಡದಲ್ಲಿ (202) ಅತ್ಯಧಿಕ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 34, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 361, ಬೀದರ್ 0, ಚಾಮರಾಜನಗರ 10, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 26, ಚಿತ್ರದುರ್ಗ 22, ದಕ್ಷಿಣ ಕನ್ನಡ 202, ದಾವಣಗೆರೆ 28, ಧಾರವಾಡ 6, ಗದಗ 0, ಹಾಸನ 72, ಹಾವೇರಿ 5, ಕಲಬುರಗಿ 5, ಕೊಡಗು 86, ಕೋಲಾರ 54, ಕೊಪ್ಪಳ 1, ಮಂಡ್ಯ 14, ಮೈಸೂರು 86, ರಾಯಚೂರು 1, ರಾಮನಗರ 1, ಶಿವಮೊಗ್ಗ 59, ತುಮಕೂರು 34, ಉಡುಪಿ 96, ಉತ್ತರ ಕನ್ನಡ 42, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ:ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ