ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಏರಿಳಿತ ಮುಂದುವರಿದಿದ್ದು, ಇಂದು ಒಟ್ಟು 1,268 ಹೊಸ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 6 ಜನ ಸಾವನ್ನಪ್ಪಿದ್ದಾರೆ.
Advertisement
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,541 ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲಿ ಇಂದು 931 ಪ್ರಕರಣ ದಾಖಲಾಗಿದ್ದು, ಅದರ ಬಳಿಕ ಮೈಸೂರಿನಲ್ಲಿ ಅತಿ ಹೆಚ್ಚು ಎಂದರೆ 100 ಪ್ರಕರಣ ವರದಿಯಾಗಿದೆ. ಈವರೆಗೆ ಒಟ್ಟು 40,174 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,229 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ.6.74 ಕ್ಕೆ ತಲುಪಿದೆ.
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 40,42,099 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,91,342 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 43,867 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,800 ಸ್ಯಾಂಪಲ್ (ಆರ್ಟಿ ಪಿಸಿಆರ್ 15,230 + 3,570 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನ 2 ಕಡೆ ಮೊಟ್ಟೆ ದಾಳಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 25, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 931, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 29, ಚಿತ್ರದುರ್ಗ 1, ದಕ್ಷಿಣ ಕನ್ನಡ 8, ದಾವಣಗೆರೆ 6, ಧಾರವಾಡ 16, ಗದಗ 0, ಹಾಸನ 3, ಹಾವೇರಿ 3, ಕಲಬುರಗಿ 13, ಕೊಡಗು 3, ಕೋಲಾರ 15, ಕೊಪ್ಪಳ 0, ಮಂಡ್ಯ 27, ಮೈಸೂರು 100, ರಾಯಚೂರು 28, ರಾಮನಗರ 13, ಶಿವಮೊಗ್ಗ 2, ತುಮಕೂರು 3, ಉಡುಪಿ 7, ಉತ್ತರ ಕನ್ನಡ 10, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 6 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶುಭಮನ್ ಗಿಲ್ ಚೊಚ್ಚಲ ಶತಕದ ಅಬ್ಬರ – ಕ್ಲೀನ್ಸ್ವೀಪ್ನಲ್ಲಿ ಸರಣಿಗೆದ್ದ ಭಾರತ