ಕನ್ನಡದಲ್ಲೂ ‘12th ಫೇಲ್’: ಇದು ವಿಧು ವಿನೋದ್ ಚೋಪ್ರಾ ಸಿನಿಮಾ

Public TV
1 Min Read
12th Fail 2

ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್‍ (KRG Studios) ಯಾವತ್ತೂ ಮುಂಚೂಣಿಯಲ್ಲಿದೆ. ಈ ಸಂಬಂಧ ಮತ್ತೊಂದು ಹೊಸ ಹೆಜ್ಜೆ ಇಡುತ್ತಿದೆ. ಬಾಲಿವುಡ್ ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕರ ಜೊತೆ ಕೈ ಜೋಡಿಸಿದೆ.

12th Fail 1

‘ಪರಿಂದಾ’, ‘1942 ಎ ಲವ್‍ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ ‘ಮುನ್ನಾಭಾಯ್‍’ ಸರಣಿಯ ನಿರ್ಮಾಪಕರಾದ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ವಿಧು ವಿನೋದ್‍ ಚೋಪ್ರಾ ಅವರೊಂದಿಗೆ ಇದೀಗ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಒಡೆತನದ ಕೆ ಆರ್ ಜಿ ಸ್ಟುಡಿಯೋಸ್‍ ಕೈಜೋಡಿಸಿದೆ. ವಿಧು ವಿನೋದ್‍ ಚೋಪ್ರಾ (Vidhu Vinod Chopra) ಅವರ ’12th ಫೇಲ್‍’ (12th Fail) ಚಿತ್ರವನ್ನು ಕನ್ನಡ ಮತ್ತು ಹಿಂದಿಯಲ್ಲಿ ಅ. 27ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ.

 

12th ಫೇಲ್‍ ಚಿತ್ರವು ಅನುರಾಗ್‍ ಪಾಠಕ್‍ ಅವರ ಅದೇ ಹೆಸರಿನ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ. ಹಲವು ಅಡೆತಡೆಗಳನ್ನು ದಾಟಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್‍ ಆಗಿ, ಅಸಾಧ್ಯವನ್ನು ಸಾಧ್ಯವನ್ನಾಗಿಸಿದ ಐಪಿಎಸ್ ಅ‍ಧಿಕಾರಿ ಮನೋಜ್‍ ಕುಮಾರ್ ಶರ್ಮಾ ಅವರ ಜೀವನವನ್ನಾಧರಿಸಿದ ಈ ಚಿತ್ರದಲ್ಲಿ ಎ ಡೆಥ್‍ ಇನ್‍ ದಿ ಗುಂಜ್‍, ಚಪಾಕ್‍, ಹಸೀನ್‍ ದಿಲ್ರುಬಾ ಮುಂತಾದ ಚಿತ್ರಗಳ ಖ್ಯಾತಿಯ ವಿಕ್ರಾಂತ್ ಮಾಸ್ಸೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article