– ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ
ಕೋಲ್ಕತ್ತಾ: 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಜನ ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದ ಸ್ಟ್ಯಾಂಡ್ ರಸ್ತೆಯಲ್ಲಿ ನಡೆದಿದೆ. ಬೆಂಕಿ ತೀವ್ರತೆಗೆ ಕಟ್ಟಡದಿಂದ ಹೊರ ಬರಲಾದೇ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ.
ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಬೆಂಕಿ ನಂದಿಸಲು ತೆರಳಿದ್ದ ಸಿಬ್ಬಂದಿ ಸಹ ಕಟ್ಟಡದಲ್ಲಿ ಸಿಲುಕಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದ ಮುಂಭಾಗಿನ ರಸ್ತೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದ ಪೊಲೀಸ್ ಕಮೀಷನರ್ ಅವರಿಂದ ಮಾಹಿತಿ ಪಡೆದುಕೊಂಡು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ಸಹ ನೀಡಲಾಗುವುದು ಎಂದು ಘೋಷಿಸಿದರು.
West Bengal: Fire breaks out on the 13th floor of a multi- storey building at Strand road in Kolkata. 8 fire tenders reach the spot. More details awaited pic.twitter.com/DLzrmBZDkF
— ANI (@ANI) March 8, 2021
ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸುಜಿತ್ ಬೋಸ್, ಇಬ್ಬರು ಸಿಆರ್ ಪಿ ಫ್ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಎಂಟು ಜನ ಕಾಣಿಸುತ್ತಿಲ್ಲ. ಬೆಂಕಿ ನಿಯಂತ್ರಣಕ್ಕೆ ತರಲಾಗಿದ್ದು, ಕಾಣೆಯಾದವರ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.