– ಅಂಕಪಟ್ಟಿಯಲ್ಲಿ ಕೊನೆ ಸ್ಥಾನಕ್ಕೆ ಜಾರಿದ ಚೆನ್ನೈ
ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶ ಮಾಡಲು ಗೆಲುವು ಪಡೆಯಲೇ ಬೇಕಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಸೋಲುಂಡಿದೆ. ಧೋನಿ ಬಳಗದ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಉತ್ತಮ ಪ್ರದರ್ಶನ ತೋರಿದ ರಾಜಸ್ಥಾನ ರಾಯಲ್ಸ್ ತಂಡ 15 ಎಸೆತ ಬಾಕಿ ಇರುವಂತೆ 7 ವಿಕೆಟ್ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ.
That’s that from Match 37.
A 97-run partnership between Buttler and Smith guide @rajasthanroyals to a 7-wicket win over #CSK.#Dream11IPL pic.twitter.com/B6hDh7HnGV
— IndianPremierLeague (@IPL) October 19, 2020
Advertisement
ಈ ಬಾರಿಯ ಟೂರ್ನಿಯಲ್ಲಿ ಚೆನ್ನೈ ತಂಡ ನೀಡಿದ್ದ ಅತ್ಯಂತ ಕಡಿಮೆ ಮೊತ್ತ 126 ರನ್ ಗಳ ಸುಲಭ ಗುರಿಯನ್ನು ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ತಂಡ 17.3 ಎಸೆತಗಳಲ್ಲಿ 3 ವಿಕೆಟ್ ಕಳೆದುಕೊಂಡು 126 ರನ್ ಗಳಿಸುವ ಮೂಲಕ ರಾಜಸ್ಥಾನ ಗೆಲುವು ಪಡೆಯಿತು.
Advertisement
ಇದರೊಂದಿಗೆ ಲೀಗ್ ಹಂತದ ಎರಡು ಪಂದ್ಯಗಳಲ್ಲಿ ರಾಜಸ್ಥಾನ ತಂಡ ಚೆನ್ನೈಗೆ ಸೋಲುಣಿಸಿತು. ಇದಕ್ಕೂ ಮುನ್ನ 2008ರ ಟೂರ್ನಿಯಲ್ಲಿ ರಾಜಸ್ಥಾನ ತಂಡ ಈ ಸಾಧನೆ ಮಾಡಿತ್ತು. ಬರೋಬ್ಬರಿ 13 ವರ್ಷಗಳ ಬಳಿಕ ಮತ್ತೆ ಸ್ಮಿತ್ ನಾಯಕತ್ವದಲ್ಲಿ ರಾಜಸ್ಥಾನ ತಂಡ ಅಪರೂಪದ ಸಾಧನೆ ಮಾಡಿದೆ. ಇತ್ತ ಇದೇ ಮೊದಲ ಬಾರಿಗೆ ಲೀಗ್ ಹಂತದ ಮೊದಲ 10 ಪಂದ್ಯಗಳ ಬಳಿಕ ಚೆನ್ನೈ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
Advertisement
Advertisement
126 ರನ್ ಗಳ ಸುಲಭ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ತಂಡ ಉತ್ತಮ ಆರಂಭವನ್ನು ಪಡೆಯಲಿಲ್ಲ. ತಂಡ 26 ರನ್ ಗಳಿಸುವ ವೇಳೆ 19 ರನ್ ಗಳಿಸಿದ್ದ ಸ್ಟೋಕ್ಸ್ ಚಹರ್ ಗೆ ವಿಕೆಟ್ ಒಪ್ಪಿಸಿದ್ದರು. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಆರ್ಡರ್ ನಲ್ಲಿ ಬಡ್ತಿ ಪಡೆದು ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಉತ್ತಪ್ಪ ಇಂದು ಕೇವಲ 4 ರನ್ ಗಳಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಕೂಡ ಬಂದಷ್ಟೇ ವೇಗದಲ್ಲಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದರೊಂದಿಗೆ ರಾಜಸ್ಥಾನ ತಂಡ ಕೇವಲ 28 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದು ಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಹಂತದಲ್ಲಿ ಒಂದಾದ ಸ್ಮಿತ್, ಬಟ್ಲರ್ ಜೋಡಿ 4ನೇ ವಿಕೆಟ್ಗೆ ಬರೋಬ್ಬರಿ 98 ರನ್ ಗಳ ಜೊತೆಯಾಟ ನೀಡಿ ತಂಡಕ್ಕೆ ಗೆಲುವಿನ ಕಾಣಿಕೆ ತಂದು ಕೊಡಲು ಯಶಸ್ವಿಯಾಗಿತ್ತು. ರಾಜಸ್ಥಾನ ಪರ 48 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಗಳೊಂದಿಗೆ 70 ರನ್ ಸಿಡಿಸಿ ಬಟ್ಲರ್ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಬಟ್ಲರ್ ಗೆ ಉತ್ತಮ ಸಾಥ್ ಕೊಟ್ಟ ನಾಯಕ ಸ್ಮಿತ್ 34 ಎಸೆತಗಳಲ್ಲಿ 26 ರನ್ ಗಳಿಸಿ ಅಜೇಯರಾಗಿ ಉಳಿದರು. ಚೆನ್ನೈ ಪರ ದೀಪಕ್ ಚಹರ್ 4 ಓವರ್ ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರೇ, ಹಜಲ್ವುಡ್ 1 ವಿಕೆಟ್ ಗಳಿಸಿದರು. ಇದನ್ನೂ ಓದಿ: ಐಪಿಎಲ್ನಲ್ಲಿ ಧೋನಿ ಐತಿಹಾಸಿಕ ದಾಖಲೆ
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ತಂಡ ಟಾಪ್ ಅರ್ಡರ್ ಆಟಗಾರರು ಮಿಂಚಲು ವಿಫಲರಾದ ಕಾರಣ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡ 125 ರನ್ ಗಳಷ್ಟೆ ಗಳಿಸಿತ್ತು. ಚೆನ್ನೈ ಪರ ಡುಪ್ಲೆಸಿಸ್ 10, ವ್ಯಾಟ್ಸನ್ 8, ಸ್ಯಾಮ್ ಕರ್ರನ್ 22 ರನ್ ಗಳಿಸಿ ನಿರಾಸೆ ಮೂಡಿಸಿದರು. ಸಿಎಸ್ಕೆ ತಂಡದ ಭರವಸೆಯ ಆಟಗಾರ ರಾಯುಡು 13 ರನ್ ಗಳಿಸಿ ತಿವಾಟಿಯಾಗೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಧೋನಿ, ಜಡೇಜಾ ಜೋಡಿ ಅರ್ಧ ಶತಕದ ಜೊತೆಯಾಟ ನೀಡಿ ತಂಡ ರನ್ ವೇಗವನ್ನು ಹೆಚ್ಚಿಸುವ ಪ್ರಯತ್ನ ಮಾಡಿತ್ತು. ಧೋನಿ 28 ಎಸೆತಗಳಲ್ಲಿ 28 ರನ್ ಗಳಿಸಿದ್ದರು. ಉಳಿದಂತೆ ಜಡೇಜಾ 30 ಎಸೆತಗಳಲ್ಲಿ 35 ರನ್, ಜಾದವ್ 7 ಎಸೆತಗಳಲ್ಲಿ 4 ರನ್ ಗಳಿಸಿ ಅಜೇಯಾರಾಗಿ ಉಳಿದರು. ಚೆನ್ನೈ ವಿರುದ್ಧ ಉತ್ತಮ ಬೌಲಿಂಗ್ ದಾಳಿ ಮಾಡಿದ ಅರ್ಚರ್, ತ್ಯಾಗಿ, ಗೋಪಾಲ್ ಹಾಗೂ ತಿವಾಟಿಯಾ ತಲಾ 1 ವಿಕೆಟ್ ಪಡೆದರು. ಇದನ್ನೂ ಓದಿ: 2ನೇ ಸೂಪರ್ ಓವರಿನಲ್ಲಿ ಬುಮ್ರಾ ಬೌಲಿಂಗ್ ಮಾಡದಿರಲು ಕಾರಣವೇನು?