ಹಾಸನ: ಜಿಲ್ಲೆಯ ವಿವಿಧೆಡೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂಲಕ ಸುಮಾರು 47 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
Advertisement
ವಿವಿಧ ಪೊಲೀಸ್ ಠಾಣೆಗಳ ಒಟ್ಟು ಆರು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯ 2, ಹೊಳೆನರಸೀಪುರ ಪೊಲೀಸ್ ಠಾಣೆಯ 1, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ 1, ಕೊಣನೂರು ಪೊಲೀಸ್ ಠಾಣೆಯ 1, ಆಲೂರು ಪೊಲೀಸ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ಬಿಜೆಪಿಗೆ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡ್ತೇವೆ – ಕಾಂಗ್ರೆಸ್
Advertisement
Advertisement
ಆರು ಪ್ರಕರಣಗಳಿಂದ ಒಟ್ಟು 13 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 303 ಗ್ರಾಂ ಚಿನ್ನ, 300 ಗ್ರಾಂ ಬೆಳ್ಳಿ, ಎರಡು ಲಾರಿ, 100 ಲೀಟರ್ ಡೀಸೆಲ್, ನಾಲ್ಕು ಬೈಕ್, ಒಂದು ಪಿಕಪ್ ವಾಹನ, ಲ್ಯಾಪ್ ಟ್ಯಾಪ್ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ಕ್ಷೇತ್ರದಲ್ಲಿ ನಾವು ಗಂಡಸರಲ್ವಾ…? ಹೊರಗಿನವರಿಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡಲ್ಲ: ಮನೋಹರ್ ತಹಶೀಲ್ದಾರ್
Advertisement
ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ನಡೆಯದಂತೆ ಪೊಲೀಸರು ಹೆಚ್ಚಿನ ನಿಗವಹಿಸಿದ್ದಾರೆ. ಜಿಲ್ಲೆಯ ವಿವಿಧೆಡೆ ನಡೆದ ಅಪರಾಧ ಪ್ರಕರಣ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಅಭಿನಂದಿಸಿದ್ದಾರೆ.