ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಟ್ನಾ ಪೊಲೀಸರು ತಿಳಿಸಿದ್ದಾರೆ.
Advertisement
ಭಾನುವಾರ ಸಂಜೆ 5 ಗಂಟೆಗೆ ಈ ಘಟನೆ ನಡೆದಿದ್ದು, ಪಾಟ್ನಾ-ಗಯಾ ಮಾರ್ಗದ ಗೌರಿಚಕ್‍ನ ಸೊಹ್ಗಿ ಗ್ರಾಮದಲ್ಲಿ ಗುಂಪೊಂದು ಸಿಎಂ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಮೂರು-ನಾಲ್ಕು ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಇದನ್ನೂ ಓದಿ: ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ
Advertisement
Bihar | A total of 13 accused have been arrested in connection with stone-pelting at the convoy of Bihar CM Nitish Kumar yesterday: SSP Patna https://t.co/vPUyPwI32X
— ANI (@ANI) August 22, 2022
Advertisement
ಇತ್ತೀಚೆಗಷ್ಟೇ ಸೊಹ್ಗಿ ಪ್ರದೇಶದಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿತ್ತು. ಇದು ಸೊಹ್ಲಿ ವಲಯದ ಗ್ರಾಮಸ್ಥರನ್ನು ಕೆರಳಿಸಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ದಾರಿಯಲ್ಲಿ ತೆರಳುತಿದ್ದ ನಿತೀಶ್ ಕುಮಾರ್ ಬೆಂಗಾವಲು ಪಡೆಯ ಮೇಲೆ ಉದ್ರಿಕ್ತರ ಗುಂಪು ಕಲ್ಲುಗಳಿಂದ ದಾಳಿ ಮಾಡಿದೆ. ಇದನ್ನೂ ಓದಿ: ಪೊಲೀಸ್ ವಾಹನದಲ್ಲೇ ಕುಳಿತು ರಾಜಾರೋಷವಾಗಿ ಕೇಕ್ ಕತ್ತರಿಸಿದ ಕೊಲೆ ಆರೋಪಿ – ವೀಡಿಯೋ ವೈರಲ್
Advertisement
ಕೆಲವು ದಿನಗಳ ಹಿಂದೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿ ‘ಮಹಾಘಟಬಂಧನ್’ -02 ಸರ್ಕಾರ ರಚನೆಯಾಗಿತ್ತು. ಬಿಜೆಪಿ ಜೊತೆಗಿನ ದೀರ್ಘ ಸಂಬಂಧವನ್ನು ಕಡಿದುಕೊಂಡು ಆರ್‌ಜೆಡಿ ನೇತೃತ್ವದ ವಿಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.