ಅಪಘಾತಕ್ಕೆ 13 ಬಲಿ – ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ಮೋದಿ

Public TV
2 Min Read
uttarakhand 2

ಡೆಹ್ರಾಡೂನ್: ಉತ್ತರ ಖಂಡದ ಚಕ್ರತಾ ತಹಸಿಲ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

modi unga

ಭಾನುವಾರ ಬೆಳಗ್ಗೆ ಚಕ್ರತಾದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಯುಟಿಲಿಟಿ ಬಸ್ ಕಮರಿಗೆ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅದರಲ್ಲಿಯೂ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ದೆಹಲಿಗೆ ಸಮೀಪವಿರುವ 14 ಜಿಲ್ಲೆಗಳಲ್ಲಿ ಪಟಾಕಿ ನಿಷೇಧಿಸಿದ ಹರಿಯಾಣ

ಬೈಲದಿಂದ ವಿಕಾಸನಗರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಇದೀಗ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಸಂತ್ರಸ್ತರ ಸಾವಿಗೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ಗೆ ಕೋವಿಡ್‌-19 ದೃಢ

ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ಮೋದಿ ಅವರು, ಉತ್ತರಾಖಂಡದ ಚಕ್ರತಾದಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖಕರವಾಗಿದೆ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಜೊತೆಗೆ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಅಂತ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *