ಚೆನ್ನೈ: ತಮಿಳುನಾಡಿನ (Tamil Nadu) ಕೃಷ್ಣಗಿರಿಯಲ್ಲಿ ನಡೆದ ನಕಲಿ ಎನ್‍ಸಿಸಿ (Fake NCC Camp) ಶಿಬಿರದಲ್ಲಿ ಕನಿಷ್ಠ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಬಿರದ ಆಯೋಜಕರು, ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಮತ್ತು ಓರ್ವ ವರದಿಗಾರ ಸೇರಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ವೇಳೆ ಖಾಸಗಿ ಶಾಲೆಯಲ್ಲಿ ಯಾವುದೇ ಎನ್‍ಸಿಸಿ ಘಟಕವಿಲ್ಲ ಎಂದು ತಿಳಿದುಬಂದಿದೆ. ಶಿಬಿರಕ್ಕೆ ನೇಮಿಸುವ ಮೊದಲು ನಕಲಿ ಸಂಸ್ಥೆಯ ಹಿನ್ನೆಲೆ ಪರಿಶೀಲನೆ ನಡೆಸಲು ಶಾಲೆಯು ವಿಫಲವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಈ ತಿಂಗಳ ಆರಂಭದಲ್ಲಿ ನಡೆದ ಮೂರು ದಿನಗಳ ಶಿಬಿರದಲ್ಲಿ 17 ಬಾಲಕಿಯರು ಸೇರಿದಂತೆ 41 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಕೆಲವು ವಿದ್ಯಾರ್ಥಿನಿಯರಿಗೆ ಆಮಿಷವೊಡ್ಡಿ ಸಭಾಂಗಣದಿಂದ ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯರು ಆರೋಪಿಸಿದ್ದಾರೆ.
Advertisement
ಮೊದಲ ಮಹಡಿಯಲ್ಲಿರುವ ಶಾಲಾ ಸಭಾಂಗಣದಲ್ಲಿ ಬಾಲಕಿಯರಿಗೆ ವಸತಿ ಕಲ್ಪಿಸಲಾಗಿದ್ದು, ಬಾಲಕರನ್ನು ನೆಲ ಮಹಡಿಯಲ್ಲಿ ಇರಿಸಲಾಗಿತ್ತು. ಶಿಬಿರದ ಮೇಲ್ವಿಚಾರಣೆಗೆ ಶಿಕ್ಷಕರನ್ನು ನಿಯೋಜಿಸಿರಲಿಲ್ಲ ಎಂದು ತನಿಖೆ ವೇಳೆ ತಿಳಿದು ಬಂದಿದೆ.
Advertisement
Advertisement
ಶಾಲಾ ಆಡಳಿತ ಮಂಡಳಿ ಲೈಂಗಿಕ ಅಪರಾಧಗಳ ಬಗ್ಗೆ ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡುವ ಬದಲು ವಿಷಯವನ್ನು ಮುಚ್ಚಿಡಲು ಯತ್ನಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸದಂತೆ ವಿದ್ಯಾರ್ಥಿನಿಯರಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ ತಂಗದುರೈ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ವಿರುದ್ಧ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ನಕಲಿ ಸಂಸ್ಥೆ ಬೇರೆ ಶಾಲೆಗಳಲ್ಲಿ ಇದೇ ರೀತಿಯ ಶಿಬಿರಗಳನ್ನು ನಡೆಸಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.