ಬೆಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದರೂ ಒಟ್ಟಾರೆಯಾಗಿ ಕರ್ನಾಟಕದಲ್ಲಿ ಶೇ.4 ರಷ್ಟು ಮಳೆ ಕೊರತೆಯಾಗಿದೆ.
ಪಬ್ಲಿಕ್ ಟಿವಿಗೆ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿ, ರಾಜ್ಯದಲ್ಲಿ ವಾಡಿಕೆಯಂತೆ 839 ಮಿಲಿ ಮೀಟರ್ ಮಳೆಯಾಗಬೇಕಿತ್ತು. ರಾಜ್ಯದಲ್ಲಿ ಇದುವರೆಗೆ 804 ಮಿಲಿ ಮೀಟರ್ ಮಳೆಯಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಒಟ್ಟಾರೆ ಶೇ.4 ರಷ್ಟು ಮಳೆ ಕೊರತೆಯಾಗಿದ್ದರೆ, ಉತ್ತರ ಒಳನಾಡಿನಲ್ಲಿ ಶೇ.37 ರಷ್ಟು ಮಳೆಯ ಕೊರತೆ ಉಂಟಾಗಿದೆ. ಮಲೆನಾಡು ಭಾಗದಲ್ಲಿ ಶೇ. 24 ರಷ್ಟು ಅಧಿಕ ಮಳೆಯಾಗಿದೆ. ಆದರೆ 13 ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದ್ದು, ರಾಯಚೂರಿನಲ್ಲಿ ಅತಿ ಕಡಿಮೆ ಮಳೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮತ್ತೆ ಮಳೆ: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟವಾಗುವ ಶುರುವಾಗಲಿದ್ದು, ಅಕ್ಟೋಬರ್ 6 ರಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಬೆಂಗಳೂರು ಭಾಗದಲ್ಲೂ ಮಳೆಯಾಗಲಿದೆ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv