ಗಾಂಧಿನಗರ: ಪಟಾಕಿ ಕಾರ್ಖಾನೆಯಲ್ಲಿ(firecrackers factory) ಸಂಭವಿಸಿದ ಸ್ಫೋಟದ ಪರಿಣಾಮ 13 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನ(Gujarat) ಬನಸ್ಕಾಂತ(Banaskantha) ಜಿಲ್ಲೆಯ ದೀಸಾ ಪಟ್ಟಣದ ಬಳಿ ನಡೆದಿದೆ.
ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡು ಕಟ್ಟಡದ ಕೆಲವು ಭಾಗಗಳು ಕುಸಿದು ಬಿದ್ದಿವೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಬನಸ್ಕಾಂತ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯರಾಜ್ ಮಕ್ವಾನಾ ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ಸೆಟೆಲ್ ಆಗಲು ಸಹಕರಿಸೋದಾಗಿ ಅತ್ಯಾಚಾರ – ಪಾದ್ರಿ ಬಜೀಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆ
ಘಟನೆಯಲ್ಲಿ ಸುಮಾರು 13 ಮಂದಿ ಸಾವನ್ನಪ್ಪಿದ್ದಾರೆ. ದೀಸಾ ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅವಶೇಷಗಳಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಾಧ್ಯತೆ
ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಂಡವೂ ಸಹ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.