ಹಾವೇರಿ: ಕಳೆದ 4 ವರ್ಷಗಳಲ್ಲಿ ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ (Employment) ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಭಾನುವಾರ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲ್ಯಾಣ ಗ್ರಾಮದ ಜಿಟಿಟಿಸಿ (GTTC) ನಿವೇಶನದ ಬಳಿ ಆಯೋಜಿಸಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಕಲ್ಯಾಣ ಗ್ರಾಮದಲ್ಲಿ ನೂತನ ತರಬೇತಿ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ಮಾಹಿತಿ ಪ್ರಾವಿಡೆಂಟ್ ಫಂಡ್ ಮತ್ತು ಇಎಸ್‌ಐನಲ್ಲಿ ದಾಖಲಾಗಿರುವ 18 ರಿಂದ 25 ವರ್ಷಗಳೊಳಗಿನವರು ದಾಖಲಿಸಿಕೊಂಡಿರುವುದನ್ನು ಆಧರಿಸಿ, ಅಧ್ಯಯನ ಮಾಡಿ ಮಾಹಿತಿ ನೀಡಲಾಗಿದೆ ಎಂದರು.
Advertisement
Advertisement
ಅನುತ್ತೀರ್ಣರಾದವರಿಗೂ ಅವಕಾಶ: ಕೇವಲ ಎಂಜಿನಿಯರಿಂಗ್, ಐಟಿ ಬಿಟಿ ಕಲಿತವರಿಗಷ್ಟೇ ಅಲ್ಲ, ಪಿಯುಸಿ ಅನುತ್ತೀರ್ಣರಾದವರಿಗೆ ಕೆಲಸ ದೊರೆಯಬೇಕು. ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಸಾಧ್ಯ ಎಂದು ಹಲವು ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ, ಬಂಕಾಪುರ, ಉಡಚೆನ್ನಾಪುರ ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಗ್ಗಾಂವಿ ಹಾಗೂ ಸವಣೂರು ಐಟಿಐಗಳು ತಲಾ 3 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕೆಎಸ್‌ಆರ್‌ಟಿಐ ಪಾಲಿಟೆಕ್ನಿಕ್ ನಿರ್ಮಾಣವಾಗುತ್ತಿದೆ. ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದ ಕೌಶಲ್ಯಾಭಿವೃದ್ಧಿ, ತರಬೇತಿಯನ್ನು ಎಲ್ಲಾ ಸಂಸ್ಥೆಗಳಲ್ಲಿಯೂ ದೊರೆಯುವಂತಾಗಬೇಕೆನ್ನುವ ಕನಸು ನನ್ನದು ಎಂದರು.
Advertisement
ಸವಣೂರಿನಲ್ಲಿ ಜವಳಿ ತರಬೇತಿಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಗ್ಗಾಂವಿಯ ಪಶು ವೈದ್ಯಕೀಯ ಪಾಲಿಟೆಕ್ನಿಕ್ ಅನ್ನು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಎಲ್ಲಾ ಸಂಸ್ಥೆಗಳು ಸದೃಢವಾಗಿ ಬೆಳೆದು ಸಾವಿರಾರು ಯುವಕರಿಗೆ ತರಬೇತಿ ನೀಡಿದರೆ ಬದುಕಿನಲ್ಲಿ ಮುಂದೆ ಸಾಗುತ್ತಾರೆ. ಕಳೆದ 4 ವರ್ಷಗಳಲ್ಲಿ ಕೋವಿಡ್ ಇದ್ದರೂ ಕೂಡಾ ಆರ್ಥಿಕತೆ ಕಾಪಾಡಿಕೊಂಡು ಬಂದಿದ್ದರ ಪರಿಣಾಮವಾಗಿ ವಿದೇಶಿ ಬಂಡವಾಳ ಹೆಚ್ಚು ಹರಿದು ಬಂದಿದೆ. ಕರ್ನಾಟಕ ಪ್ರಗತಿಪರ ಆಡಳಿಗಾರರ ಕೈಯಲ್ಲಿ ಇದ್ದುದರಿಂದ ಇದು ಸಾಧ್ಯವಾಗಿದೆ ಎಂದರು.
Advertisement
ಸ್ವಾಭಿಮಾನದ ಬದುಕು: ಮುಂದಿನ ದಿನಗಳಲ್ಲಿ ಹೆಚ್ಚಿನ ಆರ್ಥಿಕತೆ, ಮೂಲ ಸೌಕರ್ಯ, ತರಬೇತಿ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಆದರೆ ಕರ್ನಾಟಕದ ಯುವಕರಿಗೆ ಕೆಲಸ, ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಎಂಬ ನಿಟ್ಟಿನಲ್ಲಿ ಪ್ರಗತಿಪರ, ದೂರದೃಷ್ಟಿ ಇರುವ ಯುವಕರ ಭವಿಷ್ಯವನ್ನು ಬರೆಯಲು ಈ ನಿರ್ಣಯಗಳನ್ನು ಮಾಡಲಾಗಿದೆ ಎಂದರು.
ಜವಳಿ ಪಾರ್ಕ್‌ನಲ್ಲಿ 10 ಸಾವಿರ ಉದ್ಯೋಗ: ಸುಮಾರು 73 ಕೋಟಿ ರೂ.ಗಳ ಜಿಟಿಟಿಸಿ ಇಲ್ಲಿ ಬರಲಿದೆ. 4 ವರ್ಷಗಳ ಡಿಪ್ಲೊಮಾ ಕೋರ್ಸ್, ಅಲ್ಪಾವಧಿ, ಸರ್ಟಿಫೈಡ್ ಕೋರ್ಸ್ಗಳು ಲಭ್ಯವಿದೆ. ಜಗತ್ತಿನ ಆಧುನಿಕ ತರಬೇತಿಯನ್ನು ಇಲ್ಲಿ ಪಡೆಯಬಹುದು. ಜವಳಿ ಪಾರ್ಕ್, ಪಶು ವೈದ್ಯಕೀಯ ಪಾಲಿಟೆಕ್ನಿಕ್ ಬರುತ್ತಿದ್ದು, ಜವಳಿ ಪಾರ್ಕ್‌ನಲ್ಲಿಯೇ 10 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದನ್ನು ಹೊರತುಪಡಿಸಿ 5 ಸಾವಿರ ಜನರಿಗೆ ಗಾರ್ಮೆಂಟ್‌ಗಳಲ್ಲಿ ಕೆಲಸ ದೊರೆಯುತ್ತದೆ. ಯುವಕರಿಗೆ ಉದ್ಯೋಗದ ಭವಿಷ್ಯ ಬರೆಯಲು ಕಾರ್ಯಕ್ರಮ ರೂಪಿಸಿದ್ದು ಇದರ ಪ್ರಯೋಜನವನ್ನು ಯುವಕರು ಪಡೆಯಬೇಕೆಂದರು.
ಕೆಲಸ ಸಿಗುವ ಗ್ಯಾರಂಟಿ: ಜಿಟಿಟಿಸಿ ಬಹಳ ಪ್ರಮುಖ ಸಂಸ್ಥೆ. ಎಂಜಿನಿಯರಿಂಗ್ ಮುಗಿಸಿದ ನಂತರ ಜಿಟಿಟಿಸಿ ಬೆಂಗಳೂರಿನಲ್ಲಿ 6 ತಿಂಗಳ ತರಬೇತಿ ಪಡೆದಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಒಂದು ಭಾಗ ಎಂಜಿನಿಯರಿಂಗ್‌ನಲ್ಲಿ ಕಲಿತಿದ್ದಾರೆ. ಜಿಟಿಟಿಸಿಯಲ್ಲಿ 10 ಭಾಗ ಕಲಿತೆವು. ಇದರ ಪರಿಣಾಮವಾಗಿ ಟಾಟಾ ಮೋಟರ್ಸ್‌ನಲ್ಲಿ ನೌಕರಿ ಲಭಿಸಿತು. ಇಲ್ಲಿ ತರಬೇತಿ ಪಡೆದವರಿಗೆ ಶೇ.100 ರಷ್ಟು ಕೆಲಸ ಸಿಗುವ ಗ್ಯಾರಂಟಿ ಇದೆ. ಇಲ್ಲಿನ ತರಬೇತಿ ವಿಧಾನ ಬಹಳಷ್ಟು ಉತ್ತಮವಾಗಿದೆ. ಪ್ರಮಾಣಪತ್ರವಿದ್ದರೆ ಶೇ.50 ರಷ್ಟು ಅಂಕಗಳನ್ನು ಉದ್ಯೋಗದಲ್ಲಿ ನೀಡುತ್ತಾರೆ. ಜಿಟಿಟಿಸಿ ಪ್ರವೇಶ ಪಡೆದು ತರಬೇತಿ ಪಡೆದರೆ ಉಜ್ವಲ ಭವಿಷ್ಯವಿರುತ್ತದೆ ಎಂದರು. ಇದನ್ನೂ ಓದಿ: ಮಾನ ಇದ್ದವರು ಮಾನದ ಬಗ್ಗೆ ಯೋಚನೆ ಮಾಡುತ್ತಾರೆ : ಡಿಕೆಶಿ ವಿರುದ್ಧ ಸಿ.ಟಿ.ರವಿ ವ್ಯಂಗ್ಯ
1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ: ಭಾರತಕ್ಕೆ ಕೌಶಲ್ಯವಿರುವ ಯುವಕರು ಅಗತ್ಯ. ನಮ್ಮ ಪ್ರಧಾನಿಗಳು ಜನಸಂಖ್ಯೆಯನ್ನು ಬಂಡವಾಳ ಎಂದು ಪರಿಗಣಿಸಿ, ಶೇ.40 ರಷ್ಟಿರುವ ಯುವಜನಾಂಗಕ್ಕೆ ಕೌಶಲ್ಯ ನೀಡಿದರೆ. ಕೈಗಾರೀಕರಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಬಹುದು ಎಂದು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭ ಮಾಡಿದರು. ಇದರಲ್ಲಿ ಹಲವಾರು ವಿಧದ ತರಬೇತಿ ನೀಡಿ ಯುವಕರನ್ನು ತಯಾರು ಮಾಡಬಹುದಾಗಿದೆ. ರಾಜ್ಯದಲ್ಲಿ 1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ ನೀಡಲಾಗಿದೆ ಎಂದರು.
ಸಂಸ್ಥೆಯಾಗಿ ಪರಿವರ್ತನೆ: ಈ ವರ್ಷ ಜಿಟಿಟಿಸಿ ಒಂದು ಸಂಸ್ಥೆಯನ್ನಾಗಿ ಪರಿವರ್ತನೆ ಮಾಡಲಾಗುತ್ತಿದ್ದು ಹೊಸ ಸಂರಚನೆ ನೀಡಲು ತೀರ್ಮಾನಿಸಿ ಜಿಟಿಟಿಸಿ, ಐಟಿಐ, ಪಾಲಿಟೆಕ್ನಿಕ್ ಮೇಲ್ದರ್ಜೆಗೇರಿಸಲು ಬಹಳಷ್ಟು ಒತ್ತು ನೀಡಲಾಗಿದೆ. ಪಿಯುಸಿ ಅನುತ್ತೀರ್ಣರಾದವರಿಗೂ ವಿಶೇಷ ತರಬೇತಿಗೆ ಪ್ರವೇಶ ದೊರೆಯಲಿದೆ. 3-6 ತಿಂಗಳು ತರಬೇತಿ ನೀಡಿ ಉದ್ಯೋಗ ದೊರೆಯುವವರೆಗೆ ವಿದ್ಯಾರ್ಥಿ ವೇತನ ನೀಡುವ ವ್ಯವಸ್ಥೆ ಕಲ್ಪಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯಗೆ ಜ್ಞಾನ ಕಡಿಮೆ ಅನ್ಸುತ್ತೆ : ಆರ್. ಅಶೋಕ್
ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವ ಶಿವರಾಮ್ ಹೆಬ್ಬಾರ್, ಮೊದಲಾದವರು ಉಪಸ್ಥಿತರಿದ್ದರು.