ನವದೆಹಲಿ: ಕೆಂಪು ಕೋಟೆ (Red Fort) ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Condolences to those who have lost their loved ones in the blast in Delhi earlier this evening. May the injured recover at the earliest. Those affected are being assisted by authorities. Reviewed the situation with Home Minister Amit Shah Ji and other officials.@AmitShah
— Narendra Modi (@narendramodi) November 10, 2025
ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಜಿ ಹಾಗೂ ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕೆಂಪುಕೋಟೆಯಲ್ಲಿ ಏನಾಯ್ತು?
ಕೆಂಪು ಕೋಟೆ ಸಮೀಪದ ಲಾಲ್ ಕಿಲಾ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ-1ರ ಬಳಿ ಸೋಮವಾರ ಸಂಜೆ 6:45 ರಿಂದ 7 ಗಂಟೆ ಅವಧಿಯಲ್ಲಿ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಈವರೆಗೆ 14ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 10ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 6 ಮಂದಿ ಸ್ಥಿತಿ ಚಿಂತಾಜನಕವಾಗಿದೆ.
6 ಕಾರ್‌ಗಳು, 4 ಆಟೋ ಛಿದ್ರಛಿದ್ರವಾಗಿವೆ. ಕೆಂಪುಕೋಟೆ ಮೆಟ್ರೋದ ಗೇಟ್ ನಂ.1ರ ಪಾರ್ಕಿಂಗ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಆಕಸ್ಮಿಕ ಭೀಕರ ಸ್ಫೋಟದ ಸದ್ದು- ಬೆಂಕಿಗೆ ಜನ ನಡುಗಿಹೋಗಿದ್ದಾರೆ.
20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ. ಇದು ಬಾಂಬ್ ಸ್ಫೋಟವಾ..? ಅಥವಾ ಸಿಎನ್‌ಜಿ ಸ್ಫೋಟವಾ..? ಏನು ಅನ್ನೋದು ನಿಖರವಾಗಿ ಗೊತ್ತಾಗ್ತಿಲ್ಲ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ತಂಡ ಘಟನಾ ಸ್ಥಳದಲ್ಲಿ ಇದ್ದು, ಇಂಚಿಂಚೂ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಕೂಡ ಧಾವಿಸಿದ್ದು, ಸ್ಫೋಟಕ್ಕೆ ಕಾರಣ ಪತ್ತೆಹೆಚ್ಚುವ ಕಾರ್ಯದಲ್ಲಿ ತೊಡಗಿದೆ.


