ಕಲಬುರಗಿ: ಕೊರೊನಾ ಸೋಂಕಿನಿಂದ ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿದಂತೆ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ರವಿವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಿ.ಸಿ ಶರತ್ ಬಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ನಂತರ ರವಿವಾರ ಪ್ರಥಮ ಬಾರಿಗೆ ಒಂದೇ ದಿನ ಇಷ್ಟೊಂದು ಗರಿಷ್ಠ ಪ್ರಮಾಣದಲ್ಲಿ ರೋಗಿಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Advertisement
Advertisement
ಜಿಲ್ಲೆಯ ಆಳಂದ ಪಟ್ಟಣದ 65 ವರ್ಷದ ವೃದ್ಧೆ (ರೋಗಿ ಸಂಖ್ಯೆ-502), ಕಲಬುರಗಿ ನಗರದ ಖಮರ್ ಕಾಲೋನಿಯ 7 ವರ್ಷದ ಬಾಲಕ(ರೋಗಿ ಸಂಖ್ಯೆ-503) ಮತ್ತು 40 ವರ್ಷದ ಯುವತಿ (ರೋಗಿ ಸಂಖ್ಯೆ-517) ಹಾಗೂ ಇಸ್ಲಾಮಾಬಾದ ಕಾಲೋನಿಯ 43 ವರ್ಷದ ಪುರುಷ (ರೋಗಿ ಸಂಖ್ಯೆ-517) ಮತ್ತು 28 ವರ್ಷದ ಯುವತಿ (ರೋಗಿ ಸಂಖ್ಯೆ-518) ಗುಣಮುಖರಾಗಿದ್ದಾರೆ.
Advertisement
Advertisement
ಅದೇ ರೀತಿ ಕಲಬುರಗಿಯ ಮೋಮಿನಪುರ ಪ್ರದೇಶದ 45 ವರ್ಷದ ಯುವತಿ (ರೋಗಿ ಸಂಖ್ಯೆ-519), 22 ವರ್ಷದ ಯುವತಿ (ರೋಗಿ ಸಂಖ್ಯೆ-520), 28 ವರ್ಷದ ಯುವಕ (ರೋಗಿ ಸಂಖ್ಯೆ-526), 14 ವರ್ಷದ ಬಾಲಕಿ (ರೋಗಿ ಸಂಖ್ಯೆ-527), 22 ವರ್ಷದ ಯುವಕ (ರೋಗಿ ಸಂಖ್ಯೆ-528), 20 ವರ್ಷದ ಯುವತಿ (ರೋಗಿ ಸಂಖ್ಯೆ-530), 17 ವರ್ಷದ ಬಾಲಕಿ (ರೋಗಿ ಸಂಖ್ಯೆ-531) ಹಾಗೂ 12 ವರ್ಷದ ಬಾಲಕಿ (ರೋಗಿ ಸಂಖ್ಯೆ-532) ಕೊರೋನಾ ಸೋಂಕಿನ ವಿರುದ್ಧ ಹೋರಾಡಿ ಚೇತರಿಕೆ ಕಂಡಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಕೊರೊನಾ ಪೀಡಿತ 71 ರೋಗಿಗಳಲ್ಲಿ 44 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 6 ಜನ ನಿಧನರಾಗಿದ್ದು, ಉಳಿದಂತೆ 21 ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.