ಚಿತ್ರದುರ್ಗ: ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ನಲ್ಲಿ ನಡೆದಿದೆ.
Advertisement
ರಾತ್ರಿ ಹಾಸ್ಟೆಲ್ನಲ್ಲಿ ಅನ್ನ – ಸಾಂಬಾರ್ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 35 ವಿದ್ಯಾರ್ಥಿಗಳು ರಾತ್ರಿ ಊಟ ಮಾಡಿದ್ದರು. ಅವರಲ್ಲಿ 13 ಮಂದಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿ ತಲುಪಿದ್ದಾರೆ. ಅವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೊದಲೇ ಗೊತ್ತಿತ್ತು ವರುಣಾ ರಹಸ್ಯ – ಸಿದ್ದುಗೆ ಗುಟ್ಟು ಬಿಟ್ಟುಕೊಟ್ಟಿದ್ರು ಬಿಎಸ್ವೈ
Advertisement
ಸದ್ಯ ವಿದ್ಯಾರ್ಥಿಗಳಿಗೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗಿದೆ.