-ಮೇ 14ಕ್ಕೆ ಬೆಂಗಳೂರು ತಲುಪಲಿರೋ ವಿದ್ಯಾರ್ಥಿಗಳು
ನವದೆಹಲಿ: ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇದರ ನಡುವೆ ಕಾಶ್ಮೀರದಲ್ಲಿ (Kashmir) ಸಿಲುಕಿರುವ 13 ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಸ್ ರಾಜ್ಯಕ್ಕೆ ಕರೆತರಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ನೆರವಾಗಿದ್ದಾರೆ.
ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ರಾಜ್ಯದ 13 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪಾಕ್‌ನ (Pakistan) ಡ್ರೋನ್ ದಾಳಿ ಭೀತಿಯಿಂದಾಗಿ ಪರದಾಡುತ್ತಿದ್ದರು. ಇದರಿಂದಾಗಿ ತಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರೊಬ್ಬರು ತಮ್ಮ ಪುತ್ರ ಹರ್ಷಿತ್ ಕಾಶ್ಮೀರದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿರುವ ಕಾರಣ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ಸಹಾಯ ಕೋರಿ, ಹೆಚ್‌ಡಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡಿದ್ದರು.ಇದನ್ನೂ ಓದಿ: ಫೈರ್ ಬ್ರ್ಯಾಂಡ್ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
ಇದೇ ವೇಳೆ ಕರ್ನಾಟಕದ ಹಲವು ವಿದ್ಯಾರ್ಥಿಗಳು ಅಲ್ಲಿ ಓದುತ್ತಿರುವ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ರಕ್ಷಣೆಗಾಗಿ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಸದ್ಯ ವಿದ್ಯಾರ್ಥಿಗಳನ್ನು ದೆಹಲಿಯ ಕರ್ನಾಟಕ ಭವನಕ್ಕೆ ಕರೆತರಲಾಗಿದ್ದು, ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ.
ನಾಳೆ ಬೆಳಿಗ್ಗೆ 8 ಗಂಟೆಗೆ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಇದೇ 14ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.ಇದನ್ನೂ ಓದಿ: ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ