ದಿಸ್ಪುರ್: ಚಲಿಸುತ್ತಿದ್ದ ಕಾರಿನಲ್ಲಿ (Car) 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ನಾಲ್ವರು ಆರೋಪಿಗಳನ್ನು ಅಸ್ಸಾಂನ (Assam) ದೋತ್ಮಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಆರೋಪಿಗಳು ಬಾಲಕಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ (National Highway) 13ಸಿ-ಯಲ್ಲಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಈ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣ – ಮೂವರು ಅರೆಸ್ಟ್
Advertisement
Advertisement
ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಆರೋಪಿಗಳ ಶೋಧ ಆರಂಭಿಸಿದ್ದರು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ 2012 (POCSO) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement
Advertisement
ಆರೋಪಿಗಳನ್ನು ಕೊಕ್ರಜಾರ್‌ನ ನ್ಯಾಯಾಲಯಕ್ಕೆ (Court) ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್ ರೇಪ್ ಮಾಡಿ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ಹಾಕಿದ ವಿವಾಹಿತ!