ಲಕ್ನೋ: ಅಪ್ರಾಪ್ತ ಬಾಲಕನ ಮೇಲೆ ನಾಲ್ಕು ಜನ ಪುರುಷರು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಉತ್ತರ ಪ್ರದೇಶದ ಶಹಜಹಾನ್‍ಪುರದ ಪುವಾಯಾ ಎಂಬಲ್ಲಿ ನಡೆದಿದೆ.
ಶನಿವಾರ ಸಂಜೆ 13 ವರ್ಷದ ಬಾಲಕನನ್ನು ನಾಲ್ವರು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಘಟನೆ ಕುರಿತು ಬಾಲಕ ಮನೆಯವರ ಬಳಿ ವಿವರಿಸಿದ್ದು, ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ರೆಹಮಾನ್, ರವಿ, ಗುಲ್ಲಿ ಹಾಗೂ ವಾಸಿಮ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.
- Advertisement 2-
ಘಟನೆ ಬಳಿಕ ನಾಪತ್ತೆಯಾಗಿರುವ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ. ಅತ್ಯಾಚಾರಕ್ಕೊಳಗಾದ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಸ್ವೀರ್ ಸಿಂಗ್ ತಿಳಿಸಿದ್ದಾರೆ.