ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದರು.ಇದನ್ನೂ ಓದಿ: 1 ಸಾವಿರ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ – ಹಂತಕನಿಗೆ 7 ವರ್ಷ ಶಿಕ್ಷೆ
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
- Advertisement
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು.ಇದನ್ನೂ ಓದಿ: ಆಫ್ರಿಕಾ ವಿರುದ್ಧ 50 ರನ್‌ಗಳ ಭರ್ಜರಿ ಜಯ – ಭಾನುವಾರ ನ್ಯೂಜಿಲೆಂಡ್ Vs ಭಾರತ ಫೈನಲ್