138 ಕೋಟಿ ಹೂಡಿಕೆ, 160 ಉದ್ಯೋಗ ಸೃಷ್ಟಿ: ರನ್ಯಾ ರಾವ್‌ಗೆ KIADB 12 ಎಕ್ರೆ ಜಾಗ ಸಿಕ್ಕಿದ್ದು ಹೇಗೆ?

Public TV
1 Min Read
ranya rao

ಬೆಂಗಳೂರು: ಚಿನ್ನದ ಕಳ್ಳಸಾಗಣೆ (Gold Smuggling Case) ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ (Ranya Rao) ಅವರ ಮೆಸರ್ಸ್ ಕ್ಸಿರೋದ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 12 ಎಕರೆ ಭೂಮಿ 2023ರ ಜನವರಿ 2ರಂದು ಮಂಜೂರಾಗಿದೆ ಎಂದುಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಸಿಇಒ ಡಾ. ಮಹೇಶ್ ಭಾನುವಾರ ಹೇಳಿದ್ದಾರೆ.

ಹಿಂದಿನ ಸರ್ಕಾರ ಅಧಿಕಾರದಲ್ಲಿ ಇದ್ದಾಗ 2023ರ ಜನವರಿ 2ರಂದು ನಡೆದ 137ನೇ ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಕಮಿಟಿ (ಎಸ್‌ಎಲ್‌ಎಸ್‌ಡಬ್ಲ್ಯು ಸಿಸಿ) ಸಭೆಯಲ್ಲಿ ತುಮಕೂರು ಜಿಲ್ಲೆ ಸಿರಾ ಕೈಗಾರಿಕಾ ಪ್ರದೇಶದಲ್ಲಿ ಸದರಿ ಭೂಮಿ ಮಂಜೂರಾತಿಗೆ ಈ ಅನುಮೋದನೆ ನೀಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: EXCLUSIVE: ರನ್ಯಾ ಕೇಸ್‌ಗೆ ಟ್ವಿಸ್ಟ್; ನಟಿ ಒಡೆತನದ ಕಂಪನಿಗೆ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರು!

ಉಕ್ಕಿನಿಂದ ತಯಾರಿಸಲಾಗುವ ಟಿಎಂಟಿ ಪಟ್ಟಿ, ಸರಳು ಹಾಗೂ ಸಹ-ಉತ್ಪನ್ನಗಳ ಘಟಕವನ್ನು 138 ಕೋಟಿ  ರೂ.ಹೂಡಿಕೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ, ಸುಮಾರು 160 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕಂಪನಿ ಪ್ರಸ್ತಾವ ಸಲ್ಲಿಸಿತ್ತು‌ ಎಂದು ಅವರು ವಿವರಿಸಿದ್ದಾರೆ.

Share This Article