ಲಕ್ನೋ: 14 ವರ್ಷದ ಬಾಲಕಿ ಮೇಲೆ ನಾಲ್ವರು ಅಣ್ಣ-ತಮ್ಮಂದಿರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಆರೋಪಿಗಳು 23 ರಿಂದ 28 ವರ್ಷದೊಳಗಿನ ಸಹೋದರರು ಎಂದು ಗುರುತಿಸಲಾಗಿದೆ. ಬಾಲಕಿಯ ಮನೆಗೆ ನುಗ್ಗಿ ಅವರಲ್ಲಿ ಒಬ್ಬನು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉಳಿದವರು ಮೊಬೈಲ್ ಫೋನ್‍ಗಳಲ್ಲಿ ಈ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಬಾಲಕಿಯ ಕುಟುಂಬ ಸದಸ್ಯರು ಪೊಲೀಸ್ ರನ್ನು ಸಂಪರ್ಕಿಸಿದರೆ ವೀಡಿಯೊವನ್ನು ಸೋಷಿಯಲ್ ಮೀಡಿಯಾಗಳಲ್ಲಿ ಅಪ್‍ಲೋಡ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ.
ಸಂತ್ರಸ್ತೆಯ ತಂದೆ ಆರೋಪಿಗಳ ಕುಟುಂಬವನ್ನು ಸಂಪರ್ಕಿಸಿದಾಗ ಆರೋಪಿ ಡ್ಯಾನಿಶ್ ಮತ್ತು ಅವರ ಮೂವರು ಸಹೋದರರು ಗಲಾಟೆ ಮಾಡಿದ್ದಾರೆ. ಬಾಲಕಿ ತಂದೆ ಮಗಳು ಪೊಲೀಸರನ್ನು ಸಂಪರ್ಕಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ಪೋಷಕರು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 354 (ತೊಂದರೆ ನೀಡುವುದು), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 452 (ಮನೆ ಅತಿಕ್ರಮಣ), 504 (ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಆರೋಪಿಗಳ ವಿರುದ್ಧ ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಶ್ರೀಕಾಂತ್ ದ್ವಿವೇದಿ ಪ್ರಕರಣ ದಾಖಲಿಸಿದ್ದಾರೆ.