ಮನೆ ಹಾನಿ ಪರಿಹಾರ – ಧಾರವಾಡ ಜಿಲ್ಲೆಗೆ 14 ಕೋಟಿ 74 ಲಕ್ಷ ರೂ. ಬಿಡುಗಡೆ

Public TV
1 Min Read
DWD NITHESH

ಧಾರವಾಡ: ಕಳೆದ ಜುಲೈ, ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಹಾಗೂ ನವೆಂಬರ್ ತಿಂಗಳಲ್ಲಿ ಅಕಾಲಿಕ ಮಳೆಯಿಂದ ಮನೆ ಹಾನಿಯಾಗಿರುವ ಫಲಾನುಭವಿಗಳಿಗೆ ತಕ್ಷಣಕ್ಕೆ ಪರಿಹಾರ ವಿತರಿಸಲು ಧಾರವಾಡ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು 14 ಕೋಟಿ, 74 ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದಾರೆ.

DWD 1

ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಜಮೆ ಮಾಡಲು ಕ್ರಮವಹಿಸಬೇಕೆಂದು ಎಲ್ಲ ತಹಶೀಲ್ದಾರರಿಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ. ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನೀಯರಿಂಗ್ ವಿಭಾಗದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ್ ಇಓಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ವಹಿಸಿ ಜಿಲ್ಲೆಗೆ 14 ಕೋಟಿ 74 ಲಕ್ಷ ರೂ.ಗಳನ್ನು ಮನೆ ಹಾನಿ ಪರಿಹಾರ ವಿತರಣೆಗಾಗಿ ಮಂಜೂರು ಮಾಡಿದ್ದಾರೆ ಎಂದರು.

bommai 9

ಈ ಪರಿಹಾರವನ್ನು ವಿತರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದು, ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳುಗಳಲ್ಲಿ ಮನೆ ಹಾನಿಯಾಗಿರುವ ಮತ್ತು ನವೆಂಬರ್ ತಿಂಗಳಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಸಂಬಂಧಿಸಿದಂತೆ ಎ ಮತ್ತು ಬಿ ಕೆಟಗೆರಿಯ ಮನೆ ಹಾನಿ ಪ್ರಕರಣಗಳಿಗೆ 95,100 ರೂ.ಗಳನ್ನು ಮತ್ತು ಸಿ ಕೆಟಗೆರಿಯ ಮನೆ ಹಾನಿ ಪ್ರಕರಣಗಳಿಗೆ 50 ಸಾವಿರ ರೂ.ಗಳನ್ನು ಫಲಾನುಭವಿಗಳ ಖಾತೆಗೆ ತಕ್ಷಣಕ್ಕೆ ನೇರ ಜಮೆ ಮಾಡಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಪೈಪ್, ಬಕೆಟ್‍ನಲ್ಲಿ ಫುಲ್ ಹಣ – ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

MONEY

ಸರ್ಕಾರದ ಸುತ್ತೋಲೆಯಂತೆ ಎ ಮತ್ತು ಬಿ ಕೆಟಗೆರಿಯ ಮನೆ ಹಾನಿ ಪ್ರಕರಣಗಳಿಗೆ ಉಳಿದ ಪರಿಹಾರದ ಮೊತ್ತವನ್ನು ಆರ್ಜಿಎಚ್‍ಸಿಎಲ್‍ನಿಂದ ನೇರವಾಗಿ ಜಮೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *