ಬೆಂಗಳೂರು: ಅಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಒಂದನೇ ಎಸಿಎಂಎಂ ನ್ಯಾಯಾಧೀಶರು ಅದೇಶ ನೀಡಿದ್ದಾರೆ.
ನ್ಯಾಯಾಲಯಕ್ಕೆ ಇಂದು ರಜೆ ಇರುವ ಕಾರಣ ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿ ಅವರನ್ನು ನ್ಯಾಯಾಧೀಶರ ಮನೆಗೆ ಕರೆತಂದು ಹಾಜರು ಪಡಿಸಿದ್ದರು. ಈ ವೇಳೆ ನ್ಯಾ.ಜಗದೀಶ ಅವರು ನ್ಯಾಯಾಂಗ ಬಂಧನ ಆದೇಶ ನೀಡಿದ್ದು, ಸದ್ಯ ಜನಾರ್ದನ ರೆಡ್ಡಿ ಮೂರನೇ ಬಾರಿಗೆ ಜೈಲು ಸೇರಿದ್ದಾರೆ.
Advertisement
Advertisement
ಸಿಸಿಬಿ ಪೊಲೀಸರು ನೀಡಿದ ನೋಟಿಸ್ ಅನ್ವಯ ಶನಿವಾರವೇ ಸಿಸಿಬಿ ಕಚೇರಿಗೆ ಆಗಮಿಸಿದ್ದ ಜನಾರ್ದನ ರೆಡ್ಡಿ ಪೊಲೀಸರ ವಿಚಾರಣೆ ಎದುರಿಸಿದ್ದರು. ಆ ಬಳಿಕ ರೆಡ್ಡಿ ಅವರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಇದರಂತೆ ಜನಾರ್ದನ ರೆಡ್ಡಿ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ.
Advertisement
ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಜನಾರ್ದನ ರೆಡ್ಡಿ ಪರ ವಕೀಲರದ ಹನುಮಂತ ರಾಯಪ್ಪ ಅವರು, ಇದೊಂದು ಉದ್ದೇಶ ಪೂರಿತವಾದ ಪ್ರಕರಣವಾಗಿದ್ದು, ವಿಚಾರಣೆ ನಡೆಸಲು ಹಿಂದೇಟು ಹಾಕುವುದಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಆದರೆ ನ್ಯಾಯಮೂರ್ತಿಗಳು ನ್ಯಾಯಾಂಗ ಬಂಧನ ಆದೇಶದ ಸೂಚನೆ ನೀಡಿದರು. ಇತ್ತ ರೆಡ್ಡಿ ಆಪ್ತ ಪ್ರಕರಣದ ಪ್ರಮುಖವಾಗಿರುವ ಅಲಿಖಾನ್‍ಗೂ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜನಾರ್ದನ ರೆಡ್ಡಿ ಅವರೊಂದಿಗೆ ಜೈಲು ಸೇರಿದ್ದಾರೆ.
Advertisement
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಕೀಲ ಚಂದ್ರಶೇಖರ್, ಜನಾರ್ದನ್ ರೆಡ್ಡಿ ಪ್ರಕರಣದಲ್ಲಿ ನಿರಪರಾಧಿ ಆಗಿದ್ದು, ಸೋಮವಾರ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗುವುದು. ಅಂಬಿಡೆಂಟ್ ಸಂಸ್ಥೆಗೂ ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ. ಇದನ್ನ ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಡುತ್ತೇವೆ. ಜಾಮೀನಿಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದೇವೆ. ಸೋಮವಾರ ಖಂಡಿತ ನಮಗೆ ಜಾಮೀನು ಸಿಗುತ್ತೆ. ಪ್ರಕರಣದಲ್ಲಿ ರೆಡ್ಡಿ ಅವರ ಕೈವಾಡದ ಬಗ್ಗೆ ಯಾವುದೇ ಸೂಕ್ತ ಸಾಕ್ಷಿಗಳು ಇಲ್ಲ. ಉದ್ದೇಶ ಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews