ಮುಂಬೈ: ಬಿರುಗಾಳಿ ಸಹಿತ ಮಳೆಯಿಂದಾಗಿ ಬೃಹತ್ ಜಾಹಿರಾತು ಫಲಕ ಬಿದ್ದ ಪರಿಣಾಮ 14 ಜನ ಸಾವನ್ನಪ್ಪಿದ ಘಟನೆ ಘಾಟ್‍ಕೋಪರ್‍ನಲ್ಲಿ ನಡೆದಿದೆ. ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೆಟ್ರೋಲ್ ಬಂಕ್ (Petrol Bunk) ಎದುರಗಡೆ ಬೃಹತ್ ಜಾಹೀರಾತು ಫಲಕವನ್ನು (Bill Board) ನಿಲ್ಲಿಸಲಾಗಿತ್ತು. ಕಬ್ಬಿಣದ ಬಿಲ್ ಬೋರ್ಡ್ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಕಾರುಗಳ ಮೇಲೆ ಬಿದ್ದ ಪರಿಣಾಮ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಹಾರ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೃತ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಂಬೈನಲ್ಲಿರುವ ಎಲ್ಲಾ ಹೋಡಿರ್ಂಗ್‍ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ರಾಜ್ಯ ಸರ್ಕಾರವು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದು ಜೈಲಿನಿಂದ ರಿಲೀಸ್ ಆಗಲಿದ್ದಾರೆ ರೇವಣ್ಣ