ಡೆಹ್ರಾಡೂನ್: 205 ಮೀ ಆಳದ ಪ್ರಪಾತಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉತ್ತರಾಖಂಡ ರಾಜ್ಯದ ತೆಹರಿ ಜಿಲ್ಲೆಯಲ್ಲಿ ನಡೆದಿದೆ.
ಉತ್ತರಾಖಂಡದ ಸಾರಿಗೆ ನಿಗಮಕ್ಕೆ ಸೇರಿದ್ದ ಬಸ್ ಇದಾಗಿದ್ದು, ಉತ್ತರ ಕಾಶಿಯಿಂದ ಹರಿದ್ವಾರಕ್ಕೆ ಹೊರಟಿತ್ತು. ದಾರಿ ಮಧ್ಯದಲ್ಲಿ ಜಾರ್ಜ್ ಸಮೀಪದ ಸುಲೀಧರ್ ಪ್ರದೇಶದ ಎತ್ತರ ಪರ್ವತ ಶ್ರೇಣಿಯ ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉರುಳಿ ಬಿದ್ದಿದೆ. ಘಟನಾ ಸ್ಥಳದಲ್ಲಿಯೇ 14 ಜನರು ಮೃತಪಟ್ಟರೇ, 16 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ 6 ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ.
Advertisement
Advertisement
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಧಿಕಾರಿಗಳು ಹಾಗೂ ಎಸ್‌ಡಿಆರ್‌ಎಫ್ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಗಾಯಾಳುಗಳನ್ನು ಹೃಷಿಕೇಶದ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
ಅಪಘಾತದಲ್ಲಿ ಉತ್ತರಾಖಂಡ ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ.
Advertisement
14 died & 18 injured out of whom 6 are critical & admitted to AIIMS Rishikesh. Local police, admn, SDRF teams are present at spot. All the injured have been rescued. Operations to recover bodies are underway: Sanjay Gunjyal, IG (SDRF) on bus accident near Suryadhar #Uttarakhand pic.twitter.com/3DJ2UYCOYw
— ANI (@ANI) July 19, 2018