– ಮೃತರ ಸಂಖ್ಯೆ 14ಕ್ಕೆ ಏರಿಕೆ
– ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ
ಲಕ್ನೋ: ಉತ್ತರ ಪ್ರದೇಶದ(Uttar Pradesh) ಲಕ್ನೋದಲ್ಲಿ(Lucknow) ಸಂಭವಿಸಿದ ಭೀಕರ ಅಗ್ನಿ(Coaching Center Fire Accident) ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ(PM Modi) ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ(Relief Fund) ಘೋಷಿಸಿದ್ದಾರೆ.
ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ತರಬೇತಿ ಕೇಂದ್ರವಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ದುರಂತ ಹೇಗಾಯ್ತು?
ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿತು. ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಪ್ರಾಣ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನೂ ಓದಿ: ಲಕ್ನೋದ ಕೋಚಿಂಗ್ ಸೆಂಟರ್‌ನಲ್ಲಿ ಘನಘೋರ ಅಗ್ನಿ ದುರಂತ; 11 ಮಂದಿ ಸಜೀವ ದಹನ
ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಲಕ್ನೋದಲ್ಲಿ ಬೆಂಕಿ ಅವಘಡದ ಹಿನ್ನೆಲೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಅಲಿಗಢ ಪ್ರವಾಸವನ್ನು ರದ್ದುಗೊಳಿಸಿದರು. ಘಟನೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿ, ಲಕ್ನೋದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.<
लखनऊ में अग्नि दुर्घटना में हुई जनहानि अत्यंत दुःखद एवं हृदय विदारक है।
मेरी संवेदनाएं शोकाकुल परिजनों के साथ हैं।
प्रभु श्री राम से प्रार्थना है कि दिवंगत आत्माओं को शांति तथा घायलों को शीघ्र स्वास्थ्य लाभ प्रदान करें। pic.twitter.com/GR7TUpy82E
— Yogi Adityanath (@myogiadityanath) June 22, 2026
/p>
ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಯಾಗಿದ್ದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ. ಮೃತರ ಪ್ರತಿ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲಕ್ನೋದಲ್ಲಿ ಧಗಧಗನೆ ಹೊತ್ತಿ ಉರಿದ ಕೋಚಿಂಗ್ ಸೆಂಟರ್ – ಪಾರಾಗಲು ಕಟ್ಟಡದ ಮೇಲಿಂದ ಜಿಗಿದ ವಿದ್ಯಾರ್ಥಿಗಳು
Anguished by the loss of lives in a fire mishap in Lucknow, Uttar Pradesh. My condolences to the bereaved families. May the injured recover at the earliest. Rescue operations are underway and authorities are providing all possible assistance.
An ex-gratia of Rs. 2 lakh from…
— PMO India (@PMOIndia) June 22, 2026
ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕೂಡ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡದ ನಿಖರ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
