ಅಮರಾವತಿ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟ (Reactor Explosion) ಸಂಭವಿಸಿ 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.
ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ (Escientia Company) ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ ಬಂದಿಲ್ಲ, ಸಿಎಂ ಪತ್ನಿ ಅವರ ಪತ್ರ ತಿದ್ದುಪಡಿ ಆಗಿಲ್ಲ: ಬೈರತಿ ಸುರೇಶ್
Advertisement
Advertisement
ಕಾರ್ಮಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.
Advertisement
ಇನ್ನೂ ಅವಘಡ ಸಂಭವಿಸಿದ ವೇಳೆ ಕರ್ಖಾನೆ ಘಟಕದಲ್ಲೇ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಇದು ಸಹ ಒಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ನಟ ದರ್ಶನ್ ಆರೋಪಿ ನಂ.1
Advertisement
ಇನ್ನೂ ಘಟನೆ ಬಳಿಕ ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಹಾಗೂ ರಿಯಾಕ್ಟರ್ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಕೆಸೆಟ್-2024 ಅರ್ಜಿ ಸಲ್ಲಿಸಲು ಆ.28ರ ವರೆಗೆ ವಿಸ್ತರಣೆ – ಕೆಇಎ