ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ನಂತಹ ಕೇಂದ್ರೀಯ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಜಗಮ್ ಮತ್ತು ರಾಷ್ಟ್ರೀಯ ಜನತಾ ದಳವೂ ಸೇರಿ 14 ವಿಪಕ್ಷಗಳು ಒಳಗೊಂಡಿರುವ ಅರ್ಜಿದಾರರು ಬಂಧನಕ್ಕೆ ಪೂರ್ವ ಮಾರ್ಗಸೂಚಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
Advertisement
Advertisement
ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ (D.Y.Chandrachud) ಪೀಠದ ಮುಂದೆ ಮನವಿ ಮಾಡಿದರು. ಕೇಂದ್ರೀಯ ತನಿಖಾ ಸಂಸ್ಥೆಗಳ 95 ಪ್ರತಿಶತ ತನಿಖೆಗಳು ವಿರೋಧ ಪಕ್ಷಗಳ ನಾಯಕರ ವಿರುದ್ಧವಾಗಿವೆ. ಸಿಬಿಐ ಇಡಿಯನ್ನು ಸಂಪೂರ್ಣವಾಗಿ ನಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದು ವಾದಿಸಿದರು.
Advertisement
Advertisement
ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ತುರ್ತು ವಿಚಾರಣೆ ಸಾಧ್ಯವಿಲ್ಲ. ಏಪ್ರಿಲ್ 5 ರಂದು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್