ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಲಿಖಿಲ್(14) ಮೃತ ಬಾಲಕ. ಕಳೆದ ಗುರುವಾರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿತ್ತು. ವಿದ್ಯುತ್ ಸ್ಪರ್ಶದಿಂದ ಬಾಲಕನ ದೇಹ ಶೇ.40 ರಷ್ಟು ಸುಟ್ಟು ಹೋಗಿತ್ತು. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸುಮಾರು 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕ ಲಿಖಿಲ್ ಅಸುನೀಗಿದ್ದಾನೆ.
Advertisement
Advertisement
ನಡೆಡಿದ್ದೇನು?
ಮತ್ತಿಕೆರೆಯ ನಿವಾಸಿ ರಮಾದೇವಿ ಹಾಗೂ ಅಂಬರೀಶ್ ದಂಪತಿಗೆ ಲಿಖಿಲ್ ಓರ್ವ ಪುತ್ರನಾಗಿದ್ದು, 9 ನೇ ತರಗತಿ ಓದುತ್ತಿದ್ದನು. ಗುರುವಾರ ಮನೆಯ ಬಳಿ ಸ್ನೇಹಿತರೊಡನೆ ಕ್ರಿಕೆಟ್ ಆಡುವಾಗ ಕಟ್ಟಡದ ಮೊದಲ ಮಹಡಿಗೆ ಬಾಲ್ ಹೋಗಿತ್ತು. ಈ ವೇಳೆ ಅದನ್ನು ತರಲು ಹೋಗಿದ್ದ ಲಿಖಿತ್, ತಂತಿ ತುಳಿದು ಕೆಳಗೆ ಬಿದ್ದಿದ್ದನು. ತಕ್ಷಣ ಬಾಲಕನನ್ನು ಸ್ಥಳೀಯರು ಹಾಗೂ ಪೋಷಕರು ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.
Advertisement
ಈ ಹಿಂದೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು.