ಹಾವೇರಿ: ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್‍ನಿಂದ (Bus) ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾನಗಲ್ (Hangal) ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‍ನಲ್ಲಿ ಭಾರೀ ಸಂಖ್ಯೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ದರಿಂದಾಗಿ ಬಾಲಕಿ ಬಾಗಿಲ ಬಳಿಯೇ ನಿಂತಿದ್ದಳು. ದುರಾದೃಷ್ಟವಶಾತ್ ಆಯತಪ್ಪಿ ಕೆಳಗಡೆ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಾಟ್ಸಾಪ್‍ನಲ್ಲಿ ಔರಂಗಜೇಬ್ ಡಿಪಿ ಹಾಕಿದ್ದ ವ್ಯಕ್ತಿಯ ಬಂಧನ
- Advertisement
ಬಾಲಕಿ ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಶಾಲೆಗೆ ಬಸ್‍ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಪ್ರೌಢ ಶಾಲೆಗೆ ದಾಖಲಾಗಿದ್ದಳು. ಕುಟುಂಬದಲ್ಲಿ ಒಬ್ಬಳೇ ಮಗಳಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ