ಗಾಂಧಿನಗರ: ಹೋಟೆಲ್‌ನಲ್ಲಿ ಊಟ ಮಾಡಿದ ಬಳಿಕ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ 14 ವರ್ಷದ ಬಾಲಕಿ ಕುಸಿದು ಬಿದ್ದು ಸಾವನ್ನಪಿರುವ ಘಟನೆ ಗುಜರಾತ್‌ನ (Gujarat) ರಾಜ್‌ಕೋಟ್‌ನಲ್ಲಿ (Rajkot) ನಡೆದಿದೆ.
ಗುಜರಾತ್‌ನ ಜಾಮ್‌ನಗರ ನಿವಾಸಿ ಆನಂದಿ ಮೋದಿ ಮೃತ ಬಾಲಕಿ. ಆನಂದಿ ಬೇಸಿಗೆ ರಜೆಯಲ್ಲಿ ರಾಜ್‌ಕೋಟ್‌ನಲ್ಲಿರುವ ತನ್ನ ಮಾವನ ಮನೆಗೆ ತೆರಳಿದ್ದಳು. ಭಾನುವಾರ ಸಂಜೆ ಕುಟುಂಬಸ್ಥರು ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಊಟದ ಬಳಿಕ ಆನಂದಿ ಕುಟುಂಬದ ಇತರೆ ಮಕ್ಕಳೊಂದಿಗೆ ಹೋಟೆಲ್ ಆವರಣದಲ್ಲಿ ಆಡುತ್ತಿದ್ದರು. ಈ ವೇಳೆ ಆನಂದಿ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಇದನ್ನೂ ಓದಿ: ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಖಾಸಗಿ ಜೆಟ್ ಪತನ – ಇಬ್ಬರು ಪೈಲಟ್ ಸಜೀವ ದಹನ, ಬೆಚ್ಚಿಬೀಳಿಸುವ ವಿಡಿಯೋ ವೈರಲ್
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಹೃದಯಾಘಾತದಿಂದ (Heart Attack) ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: Vijayapura | ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ
