ಕೇರಳದಲ್ಲಿ ನಿಫಾ ವೈರಸ್‍ಗೆ ಮೊದಲ ಬಲಿ – ಹೆಚ್ಚಿದ ಆತಂಕ

Public TV
1 Min Read
14 Year Old Kerala Boy Infected With Nipah Virus Dies Of Cardiac Arrest

ತಿರುವನಂತಪುರಂ: ಕೇರಳದ (Kerala) ಮಲಪ್ಪುರಂನಲ್ಲಿ ನಿಫಾ ವೈರಸ್ (Nipah Virus) ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ಸೋಂಕಿಗೆ ತುತ್ತಾಗಿದ್ದ ಬಾಲಕನಿಗೆ ಭಾನುವಾರ ಬೆಳಗ್ಗೆ 10:50ಕ್ಕೆ ಪಾಂಡಿಕ್ಕಾಡ್‍ನ ತೀವ್ರ (Cardiac Arrest) ಹೃದಯ ಸ್ತಂಭನವಾಗಿತ್ತು. ಬಳಿಕ ವೆಂಟಿಲೇಟರ್ ಸಹಾಯದಿಂದ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವಿಗೀಡಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? – ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು

ಅಂತಾರಾಷ್ಟ್ರೀಯ ಶಿಷ್ಟಾಚಾರದ ಪ್ರಕಾರ ಬಾಲಕನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದವರೊಂದಿಗೆ ಚರ್ಚಿಸಿದ ನಂತರ ಅಂತ್ಯಕ್ರಿಯೆಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿಫಾ ಜಾಗೃತಿಗಾಗಿ ಸಾರ್ವಜನಿಕ ಸುರಕ್ಷತೆಗಾಗಿ ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿಬರ್ಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ವೈಭವದ ಗುರುಪೂರ್ಣಿಮೆ ಆಚರಣೆ – ಹೂವು, ಹಣ್ಣುಗಳಿಂದ ಅದ್ಧೂರಿ ಅಲಂಕಾರ!

Share This Article